ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ಪ್ರತ್ಯೇಕ ಪ್ರಕರಣ; ₹8 ಲಕ್ಷ ನಗದು ವಶ

Last Updated 26 ಮಾರ್ಚ್ 2023, 10:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ರಹಿತ ₹8 ಲಕ್ಷ ನಗದು ಹಣ ಪೊಲೀಸರು ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಹರಪನಹಳ್ಳಿ ತಾಲ್ಲೂಕಿನ ಹೊಸಪೇಟೆ– ಶಿವಮೊಗ್ಗ ರಾಜ್ಯ ಹೆದ್ದಾರಿ 25ರ ದುಗ್ಗಾವತಿ ಚೆಕ್‌ ಪೋಸ್ಟ್‌ನಲ್ಲಿ ಸಂತೋಷ್‌ ಎಂಬುವರು ಮುತ್ತೂಟ್‌ ಫೈನಾನ್ಸ್‌ ಹರಿಹರ ಶಾಖೆಯಿಂದ ಬೈಕ್‌ನಲ್ಲಿ ₹5 ಲಕ್ಷ ತೆಗೆದುಕೊಂಡು ಹೋಗುತ್ತಿದ್ದರು. ದಾವಣಗೆರೆ ಜಿಲ್ಲೆಯ ಕಕ್ಕರಗೊಳ್ಳದ ತಿಮ್ಮೇಶ್‌ ಅವರ ಕಾರಿನಿಂದ ₹3 ಲಕ್ಷ ವಶಕ್ಕೆ ತೆಗೆದುಕೊಂಡಿದ್ದಾರೆ.

ಇಬ್ಬರು ಹಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ತೋರಿಸದ ಕಾರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲುವಾಗಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT