ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿಗೆ ನೀರು: ಅನಧಿಕೃತ ನೀರೆತ್ತುವುದಕ್ಕೆ ನಿಷೇಧ

Published 30 ಮಾರ್ಚ್ 2024, 15:36 IST
Last Updated 30 ಮಾರ್ಚ್ 2024, 15:36 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ಯೋಜನೆಗಳಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸುತ್ತಿದ್ದು, ಅನಧಿಕೃತ ಪಂಪಸೆಟ್‌ಗಳ ಮೂಲಕ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮಾರ್ಚ್ 29ರ ರಾತ್ರಿಯಿಂದಲೇ ಏಪ್ರಿಲ್ 6ರವರೆಗೆ ಪ್ರತಿದಿನ 3000 ಕ್ಯೂಸೆಕ್ಸ್, ಏ. 6ರಂದು 2200 ಕ್ಯೂಸೆಕ್ಸ್ ಸೇರಿ ಒಟ್ಟು 2 ಟಿ.ಎಂ.ಸಿ ನೀರು ಹರಿಸಲು ಅನುಮತಿ ನೀಡಿ ಆದೇಶವಾಗಿದೆ.

ಸಾರ್ವಜನಿಕರಿಗೆ ಸೂಚನೆ: ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ನದಿ ದಂಡೆಯಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‌ಸೆಟ್‌ಗಳಿAದ ನೀರೆತ್ತುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲೀ, ಜನರು ಮತ್ತು ದನಕರುಗಳನ್ನು ನದಿಗೆ ಇಳಿಸುವುದಾಗಲಿ ಹಾಗೂ ನಿರ್ಮಾಣ ಕಾಮಗಾರಿಗಳಿಗೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್‌ ಹಾಗೂ ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.1ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಹೊಸಪೇಟೆ (ವಿಜಯನಗರ): ಭಾರತ ಸರ್ಕಾರದ ಕಾರ್ಯಕ್ರಮವಾದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 2024-25ನೇ ಸಾಲಿನ ಐದನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವು ಏಪ್ರಿಲ್ 1ರಿಂದ ಆರಂಭಗೊಳ್ಳಲಿದೆ.

ಈ ಅಭಿಯಾನ ಏ.30ರವರೆಗೆ ಹಮ್ಮಿಕೊಳ್ಳಲು ರಾಜ್ಯ ಮಟ್ಟದ ವಿರ್ವಹಣಾ ಸಮಿತಿ ಸಭೆಯಲ್ಲಿ ವೇಳಾಪಟ್ಟಿ ನಿಗದಿಯಾಗಿದೆ. ತಾಲ್ಲೂಕಿನ ಪಟ್ಟಣ ಪ್ರದೇಶ ಮತ್ತು 45 ಗ್ರಾಮಗಳಲ್ಲಿನ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸಲು ರೈತರು ಸಹಕರಿಸಬೇಕು ಎಂದು ವಿಜಯನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧೆಡೆ ವಿದ್ಯುತ್ ವ್ಯತ್ಯಯ ಇಂದು 

ಹೊಸಪೇಟೆ (ವಿಜಯನಗರ): ಜೆಸ್ಕಾಂ ಕಮಲಾಪುರದ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಪ್ರಯುಕ್ತ ಮಾರ್ಚ್ 31ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಕಮಲಾಪುರ ಶಾಖಾ ವ್ಯಾಪ್ತಿಗೆ ಬರುವ ಕಮಲಾಪುರ ಪಟ್ಟಣ ಪಂಚಾಯಿತಿ, ಬುಕ್ಕಸಾಗರ ಗ್ರಾಮ ಪಂಚಾಯಿತಿ, ಸೀತಾರಾಮ ತಾಂಡಾ, ಮಲಪನಗುಡಿ, ಹಂಪಿ, ಪಾಪಿನಾಯಕನಹಳ್ಳಿ, ಗಾದಿಗನೂರು ಮತ್ತು ಬೈಲುವದ್ದೀಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್ ಸೆಟ್ ರೈತರಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಹಕರಿಸಬೇಕು ಎಂದು ಎಇಇ ಅವರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT