ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸ್ ನಿಲ್ದಾಣದ ಆವರಣ ಕೆಸರುಮಯ: ಶಾಸಕ ನೇಮರಾಜನಾಯ್ಕ ಭೇಟಿ, ಪರಿಶೀಲನೆ

Published 16 ಮೇ 2024, 15:35 IST
Last Updated 16 ಮೇ 2024, 15:35 IST
ಅಕ್ಷರ ಗಾತ್ರ

ಕೊಟ್ಟೂರು: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಸುರಿದ ಮಳೆಗೆ ಇಲ್ಲಿನ ಬಸ್ ನಿಲ್ದಾಣ ಮಳೆ ನೀರು ಹಾಗೂ ತ್ಯಾಜ್ಯದಿಂದ ಆವೃತವಾಗಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾದ ಹಿನ್ನೆಲೆಯಲ್ಲಿ ಶಾಸಕ ಕೆ.ನೇಮರಾಜನಾಯ್ಕ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ನಿಲ್ದಾಣದ ಅಭಿವೃದ್ಧಿಗೆ ಕಳೆದ ಮಾರ್ಚ್‌ನಲ್ಲಿ ₹3 ಕೋಟಿ ₹50 ಲಕ್ಷ ಅನುದಾನ ಮಂಜೂರಾಗಿದೆ. ಲೋಕಸಭಾ ಚುನಾವಣೆ ನೀತಿಸಂಹಿತೆ ಮುಗಿದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಈಗಿರುವ ಬಸ್ ನಿಲ್ದಾಣದ ಸ್ಥಳದಲ್ಲಿಯೇ ನೂತನ ನಿಲ್ದಾಣ ನಿರ್ಮಿಸಿ, ಎಲ್ಲಾ ಸೌಲಭ್ಯ ಕಲ್ಪಿಸಿಕೊಡಲಾಗುವುದು’ ಎಂದು ಭರವಸೆ ನೀಡಿದರು.

‘ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರ ನಿರ್ಮಿಸಲಾಗುವುದು ಹಾಗೂ ಮಿನಿ ವಿಧಾನಸೌಧಕ್ಕೂ ಚಾಲನೆ ನೀಡಲಾಗುವುದು’ ಎಂದು ತಿಳಿಸಿದರು.

ತಹಶೀಲ್ದಾರ್ ಜಿ.ಕೆ.ಅಮರೀಶ್, ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗಳು, ಡಿಪೋ ವ್ಯವಸ್ಥಾಪಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT