ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಆತ್ಮಹತ್ಯೆಗೆ ಪ್ರಚೋದನೆ, ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

Last Updated 8 ಸೆಪ್ಟೆಂಬರ್ 2022, 15:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇರೆಗೆ ಪತ್ರಕರ್ತ ಮಹಮ್ಮದ್‌ ಗೌಸ್‌ ವಿರುದ್ಧ ಗುರುವಾರ (ಸೆ.8) ನಗರದ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಡಿ. ಪೋಲಪ್ಪ ಹಾಗೂ ಅವರ ಕುಟುಂಬದ ಆರು ಜನ ಸದಸ್ಯರು ಆ. 30ರಂದು ಎಸ್ಪಿ ಕಚೇರಿಯ ಧ್ವಜ ಕಟ್ಟೆ ಬಳಿ ಪೆಟ್ರೋಲ್‌ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ‘ಜಾಗೃತಿ ಬೆಳಕು’ ಪತ್ರಿಕೆಯ ವರದಿಗಾರ ಮಹಮ್ಮದ್‌ ಗೌಸ್‌ ಅವರು ಕೈಸನ್ನೆ ಮೂಲಕ ಮೈಮೇಲೆ ಪೆಟ್ರೋಲ್‌ ಸುರಿದುಕೊಳ್ಳುವಂತೆ ಆತ್ಮಹತ್ಯೆಗೆ ಪ್ರಚೋದನೆ ಮಾಡಿದ್ದಾರೆ. ಪ್ರಚೋದನೆಗೆ ಸಂಬಂಧಿಸಿದ ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

‘ಸಚಿವ ಆನಂದ್‌ ಸಿಂಗ್‌ ಅವರು ‘ಪೆಟ್ರೋಲ್‌ ಸುರಿದು ಸುಟ್ಟು ಹಾಕುತ್ತೇನೆ’ ಎಂದು ನನ್ನ ಮನೆಗೆ ಬಂದು ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದರು. ಅದೇ ದಿನ ಎಸ್ಪಿ ಕಚೇರಿಗೆ ದೂರು ಕೊಡಲು ಹೋದಾಗ ಎಸ್ಪಿ ಇರಲಿಲ್ಲ. ಬೇಸತ್ತು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆ. ಅನಂತರ ಪೊಲೀಸರು ಬಂದು ತಡೆದರು’ ಎಂದು ಡಿ. ಪೋಲಪ್ಪ ಲಿಖಿತ ದೂರು ಕೊಟ್ಟಿದ್ದರು. ಅದಾದ ನಂತರ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT