ಶನಿವಾರ, ಜನವರಿ 29, 2022
24 °C

ಕೋವಿಡ್ ನಿಯಮ ಉಲ್ಲಂಘನೆ; ಎಎಪಿಯ 50 ಜನರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಕೋವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇರೆಗೆ ಆಮ್ ಆದ್ಮಿ ಪಕ್ಷದ (ಎಎಪಿ) 50 ಜನ ಮುಖಂಡರು, ಕಾರ್ಯಕರ್ತರ ವಿರುದ್ಧ ಪೊಲೀಸರು ಬುಧವಾರ ತಡರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಎಪಿಯಿಂದ ಗೆದ್ದು ಬಿಜೆಪಿ ಸೇರಿದ ನಗರಸಭೆ ಸದಸ್ಯ ಶೇಕ್ ಷಾ ವಲಿ ವಿರುದ್ಧ ನಗರದ ಜಂಬುನಾಥಹಳ್ಳಿ ರಸ್ತೆ ಹಾಗೂ ಅವರ ಮನೆ ಬಳಿ ಎಎಪಿಯ ಮುಖಂಡರು, ಕಾರ್ಯಕರ್ತರು ಕೋವಿಡ್ ನಿಯಮ ಉಲ್ಲಂಘಿಸಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲರ ವಿರುದ್ಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಎಎಪಿ ಕಾರ್ಯಕರ್ತರು ಪೊರಕೆ ಹಿಡಿದುಕೊಂಡು ಶೇಕ್ ಷಾ ವಲಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಸಚಿವ ಆನಂದ್ ಸಿಂಗ್ ಹಣದ ಆಮಿಷವೊಡ್ಡಿ ಪಕ್ಷದ ಚುನಾಯಿತ ಸದಸ್ಯನನ್ನು ಖರೀದಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು