ಸೋಮವಾರ, ಜೂನ್ 21, 2021
21 °C

ಐದು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಕೋವಿಡ್‌–19 ನಿಷೇಧಾಜ್ಞೆ ಉಲ್ಲಂಘಿಸಿ ವಹಿವಾಟು ನಡೆಸುತ್ತಿದ್ದ ಇಲ್ಲಿನ ಬಡಾವಣೆ ಪೊಲೀಸ್‌ ಠಾಣೆ ವ್ಯಾಪ್ತಿಯ ಐದು ಅಂಗಡಿ ಮಾಲೀಕರ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.

ಜೆನ್ಕೊ ಬೇರಿಂಗ್‌ ಪ್ರೈವೇಟ್‌ ಲಿಮಿಟೆಡ್‌ನ ಪವನಕುಮಾರ್‌, ಜೆಎಸ್‌ಡಬ್ಲ್ಯೂ ಗ್ರೂಪ್‌ ಬಣ್ಣದ ಅಂಗಡಿ ಮಾಲೀಕ ಜಾಹೀರ್‌ ಅಹಮ್ಮದ್‌, ಚಪ್ಪಲಿ ಮಳಿಗೆ ಮಾಲೀಕ ಸೈಯದ್‌ ಅಸ್ಲಂ, ಭದ್ರಿ ಹಾರ್ಡ್‌ವೇರ್‌ನ ರಾಜಸಾಬ್‌ ಗೂಡ್‌ಸಾಬ್, ಕ್ಲಾನಿಕ್‌ ಎಲೆಕ್ಟ್ರಿಕಲ್‌ ಅಂಗಡಿಯ ನಿಸಾರ್‌ ಅಹಮ್ಮದ್‌ ವಿರುದ್ಧ ಪ್ರಕರಣ ದಾಖಲಾಗಿದೆ.

‘ನಿಷೇಧಾಜ್ಞೆ ಉಲ್ಲಂಘಿಸಿ ಅವಧಿ ಮೀರಿ, ಹೆಚ್ಚಿನ ಜನರನ್ನು ಸೇರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದ ಐದು ಮಳಿಗೆ ಮಾಲೀಕರ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು