ಭಾನುವಾರ, ಆಗಸ್ಟ್ 14, 2022
28 °C

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ: ಸಂಸದ ದೇವೇಂದ್ರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ (ವಿಜಯನಗರ ಜಿಲ್ಲೆ): ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ’ ಎಂದು ಸಂಸದ ವೈ. ದೇವೇಂದ್ರಪ್ಪ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಬಹುತೇಕ ಯಾವುದೇ ಬದಲಾವಣೆ ಆಗುವುದಿಲ್ಲ. ಬಿಜೆಪಿ ಹೈಕಮಾಂಡ್ ಬಹಳ ಬಿಗಿ ಇದೆ. ಮುಖ್ಯಮಂತ್ರಿ ಬದಲಾವಣೆ ಸುಲಭವಿಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್  ಬೆಂಗಳೂರಿನಲ್ಲಿ ಮೂರು ದಿನದಿಂದ ಚರ್ಚೆ ನಡೆಸುತ್ತಿದ್ದಾರೆ. ಇಂದು ಸಂಜೆ ನನಗೂ ಕರೆ ಬರಬಹುದು, ಬಂದರೆ ನಾಳೆ ಹೋಗಿ ಭೇಟಿಯಾಗುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

‘ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದು ವಿರೋಧ ಪಕ್ಷಗಳು ಗುಲ್ಲೆಬ್ಬಿಸುತ್ತಿವೆ. ಅದಕೆಲ್ಲ ಅವರೇ ಕಾರಣ. ಈ ಹಿಂದೆ ಆಡಳಿತ ಮಾಡಿದ ಸರ್ಕಾರ ತೈಲಕ್ಕಾಗಿ ಮಾಡಿದ ಸಾಲವನ್ನು ಪ್ರಧಾನಿ ನರೇಂದ್ರ ಮೋದಿಯವರು ಬಡ್ಡಿ ಸಮೇತ ಪ್ರತಿ ದಿನ ತೀರುಸುತ್ತಿದ್ದಾರೆ. ಇದನ್ನು ವಿರೋಧ ಪಕ್ಷಗಳು ಮನಗಾಣಬೇಕು’ ಎಂದು ತಿರುಗೇಟು ನೀಡಿದರು.

‘ಗೊಬ್ಬರ ತಯಾರಿಕೆ ಕಂಪನಿಗಳು ಏಕಾಏಕಿ ರಸ ಗೊಬ್ಬರ ಬೆಲೆ ಏರಿಕೆ ಮಾಡಿರುವುದರಿಂದ ರೈತರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ರಾಜ್ಯದ ಎಲ್ಲ ಸಂಸದರು ಪ್ರಧಾನಿಗೆ ಮನವಿ ಮಾಡಿದ್ದರಿಂದ ರಸಗೊಬ್ಬರ ಬೆಲೆ ಇಳಿಸಿದ್ದಾರೆ’ ಎಂದು ತಿಳಿಸಿದರು.

ಇದನ್ನೂ ಓದಿ... ಲಾಕ್‌ಡೌನ್‌ ನಿಯಮಾವಳಿ ಸಡಿಲಿಕೆ ಬಗ್ಗೆ ಶನಿವಾರ ತೀರ್ಮಾನ: ಸಿಎಂ ಬಿಎಸ್‌ವೈ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು