ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಸ್‌ಮಸ್‌: ಕ್ರೈಸ್ತ ಧರ್ಮಿಯರಿಂದ‌ ಸಾಮೂಹಿಕ‌ ಪ್ರಾರ್ಥನೆ

Last Updated 25 ಡಿಸೆಂಬರ್ 2022, 6:24 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕ್ರಿಸ್‌ಮಸ್‌ ಹಬ್ಬದ ಅಂಗವಾಗಿ ಕ್ರೈಸ್ತ ಧರ್ಮಿಯರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಚರ್ಚ್‌ಗಳಲ್ಲಿ ಭಾನುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಗರದ ಸಿಎಸ್ಐ, ಕೆಥೋಲಿಕ್ ಹಾಗೂ ಮೆಥೋಡಿಸ್ಟ್ ಚರ್ಚ್‌ಗಳಲ್ಲಿ ಗಳಲ್ಲಿ ವಿಶೇಷ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಭಾಗಗಳಿಂದ ಕ್ರೈಸ್ತರು ಬಂದು ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಶನಿವಾರ ಮಧ್ಯರಾತ್ರಿಯಿಂದಲೇ ಚರ್ಚ್‌ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಆರಂಭಗೊಂಡಿದ್ದವು. ಚರ್ಚ್‌ಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಕಣ್ಮನ ಸೆಳೆಯುವ ರೀತಿಯಲ್ಲಿ ಗೋದಲಿ ನಿರ್ಮಿಸಲಾಗಿದೆ. ಸಾಂತಾ ಕ್ಲಾಸ್ ವೇಷ ಧರಿಸಿದ ಕೆಲವರು ಮಕ್ಕಳಿಗೆ ಚಾಕೊಲೇಟ್, ಬಿಸ್ಕತ್ ವಿತರಿಸಿದರು.

ತಾಲ್ಲೂಕಿನ ಮರಿಯಮ್ಮನಹಳ್ಳಿ, ಕಮಲಾಪುರ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಡಗರ, ಸಂಭ್ರಮದಿಂದ ಹಬ್ಬ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT