ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯಿಂದ ಹಂಪಿಯಲ್ಲಿ ಸ್ವಚ್ಛತಾ ಅಭಿಯಾನ

Published 23 ಜೂನ್ 2024, 15:45 IST
Last Updated 23 ಜೂನ್ 2024, 15:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜನಸಂಘದ ಸಂಸ್ಥಾಪಕ ಶ್ಯಾಮ್‌ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಪ್ರಯುಕ್ತ ವಿಜಯನಗರ ಜಿಲ್ಲಾ ಬಿಜೆಪಿ ವತಿಯಿಂದ ಭಾನುವಾರ ಹಂಪಿಯಲ್ಲಿ ಸ್ಬಚ್ಛತಾ ಅಭಿಯಾನ ಹಾಗೂ ಪರಿಸರ ದಿನ ಆಚರಿಸಲಾಯಿತು.

ಬಿಜೆಪಿ ಯುವ ಮೋರ್ಚಾದ ರಾಜ್ಯ ಕೋಶಾಧ್ಯಕ್ಷ ಸಿದ್ಧಾರ್ಥ ಸಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಜಾಗತಿಕ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ನಾವೆಲ್ಲರೂ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು.  ರಸ್ತೆ, ಶಾಲಾ ಆವರಣ, ಸರ್ಕಾರಿ ಕಚೇರಿ, ಮನೆಗಳ ಆವರಣ ಸೇರಿದಂತೆ ಎಲ್ಲೆಡೆ ಸಸಿಗಳನ್ನು ನೆಟ್ಟು ಪೋಷಿಸಬೇಕು’ ಎಂದು ಸಲಹೆ ನೀಡಿದರು.

‘ಹಿರಿಯರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜನಸಂಘ ಸ್ಥಾಪನೆ ಮಾಡುವ ಮೂಲಕ ದೇಶದ ಸಂರಕ್ಷಣೆಗೆ ಶ್ರಮಿಸಿದ್ದಾರೆ. ಕಾಂಗ್ರೆಸ್ ನೀತಿಗಳ ವಿರುದ್ಧ ಹಾಗೂ ದೇಶದ ರಕ್ಷಣೆಗೆ ಹೋರಾಟ ನಡೆಸಿದ್ದಾರೆ. ಅವರ ಹೋರಾಟದ ಫಲವಾಗಿಯೇ ಈಗ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಿದ್ದಾರೆ. ಎಲ್ಲಾ ರಂಗದಲ್ಲೂ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಮುನ್ನಡೆಯಲ್ಲಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷೆ ಭಾರತಿ ಪಾಟೀಲ್, ಜಿಲ್ಲಾ ವಕ್ತಾರ ಅಶೋಕ್ ಜೀರೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಮಂಡಳ ಅಧ್ಯಕ್ಷ ಶಂಕರ್ ಮೇಟಿ, ನಗರ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ, ಮುಖಂಡರಾದ ರಜನಿಗೌಡ, ನಾಗರಾಜ, ಚಂದ್ರು ದೇವಲಾಪುರ, ಮಧುರ ಚನ್ನಶಾಸ್ತ್ರಿ, ಹೊನ್ನೂರಪ್ಪ, ಮಾಯಾ ಇದ್ದರು.

ಬಳಿಕ ಹಂಪಿಯ ವಿರೂಪಾಕ್ಷೇಶ್ವರ ರಥಬೀದಿ‌, ಸಾಲು ಮಂಟಪದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT