ಮಂಗಳವಾರ, ಮೇ 24, 2022
31 °C

ಕಾಂಗ್ರೆಸ್ಸಿಗರೇ ಜಡ್ಜ್, ಲಾಯರ್ ಎಲ್ಲ ಆಗಿದ್ದಾರೆ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಹಾಗೂ ಕಾಂಗ್ರೆಸ್ಸಿನವರು ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನ ವಿಚಾರದಲ್ಲಿ ಜಡ್ಜ್, ಲಾಯರ್, ಪ್ರಾಸಿಕ್ಯೂಟರ್ ಸೇರಿದಂತೆ ಎಲ್ಲ ಅವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಗಿ ಹೇಳಿದರು.

ಸಂತೋಷ್ ಪಾಟೀಲ ಸಾವಿನ ನಂತರ ಪ್ರಕರಣ ದಾಖಲಾಗಿದೆ. ಪ್ರಾಮಾಣಿಕ, ಪಾರದರ್ಶಕವಾಗಿ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗಣಪತಿ ಅವರು ಕೆ.ಜೆ. ಜಾರ್ಜ್ ವಿರುದ್ಧ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಅವರ ವಿರುದ್ಧ ಎಫ್ ಐ ಆರ್ ನಲ್ಲಿ ಹೆಸರಿರಲಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಎಲ್ಲಿದೆ ಎಂದು ಇಲ್ಲಿ ಸುದ್ದಿಗಾರರನ್ನು ಕೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು