ಕೂಡ್ಲಿಗಿ: ‘ಕೂಡ್ಲಿಗಿ ಕ್ಷೇತ್ರ ಬರದ ನಾಡಾಗಿತ್ತು, ಆದರೆ, ಇಲ್ಲಿಗೆ ಕ್ರಿಯಾಶೀಲ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ನಿಮಗೆ ಸಿಕ್ಕಿದ್ದಾರೆ. ಇನ್ನು ಇದು ಹಿಂದುಳಿದ ತಾಲ್ಲೂಕಲ್ಲ. ಇಡೀ ಸರ್ಕಾರವೇ ಶಾಸಕರ ಜತೆಗೆ ಇದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವ ಮೂಲಕ ಶಾಸಕರ ಕೆಲಸವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭಾನುವಾರ ಇಲ್ಲಿ ಚಾಲನೆ ನೀಡಿ ಹಾಗೂ ₹1,250 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃದ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ’ ಎಂದರು.

‘ನಮ್ಮದು ಅಭಿವೃದ್ಧಿ ಪರವಾದ, ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ. ಶ್ರೀನಿವಾಸ್ ಅವರ ಅಪ್ರೋಚ್ ಇದೆಯಲ್ಲ, ಅದರಿಂದಲೇ ಅನುದಾನ ಕೊಟ್ಟು ಬಿಡೋಣ ಅನ್ನಿಸುತ್ತದೆ. ಜೊತೆಗೆ ಚುನಾವಣೆ ವೇಳೆ ಹೇಳಿದಂತೆ ಐದು ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಈ ಭಾಗದ ಜನರಿಗೆ ಕುಡಿಯುವ ನೀರು, ಅಂತರ್ಜಲಕ್ಕೆ ಕೆರೆ ತುಂಬಿಸುವ ಯೋಜನೆಯಿಂದ ಪ್ರಯೋಜನವಾಗಲಿದೆ. ನಮ್ಮ ಸರ್ಕಾರ ನೀರಾವರಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು, ನಾವು ಅನೇಕ ಕೆಲಸ ಮಾಡಿದ್ದೇವೆ’ ಎಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ನಾನು ಎನ್.ಟಿ.ಬೊಮ್ಮಣ್ಣ, ಬಂಗಾರಪ್ಪ ಅವರ ಶಿಷ್ಯ. ಕೆರೆ ತುಂಬಿಸುವ ಕಾರ್ಯಕ್ರಮ ಮಾಡಬೇಕೆಂದು ಬೊಮ್ಮಣ್ಣ ಕೇಳಿದ್ದರು. ಆಗ ಮಾಡಿಕೊಡುತ್ತೇನೆ ಎಂದು ಹೇಳಿದ್ದೆ. ಈಗ ಅವರ ಸುಪುತ್ರನ ಕಾಲದಲ್ಲಿ ಅದು ಆಗಿದೆ. ಇಂತಹ ಶಾಸಕನ್ನು ಆಯ್ಕೆ ಮಾಡಿದ್ದಕ್ಕೆ ನಮಸ್ಕಾರ ಸಲ್ಲಿಸುತ್ತೇನೆ’ ಎಂದರು.

‘ಒಂದು ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ಒಬ್ಬ ವ್ಯಕ್ತಿ ಕೈಯಲ್ಲಿ ಇಲ್ಲ. ಎಲ್ಲರೂ ಶಕ್ತಿ ತುಂಬಿದಾಗ ಅದು ಆಗುತ್ತದೆ. ಆ ಕೆಲಸವನ್ನು ಶ್ರೀನಿವಾಸ್ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ತೋರಿಸಲು ಇಡೀ ಸರ್ಕಾರವೇ ಇಂದು ಇಲ್ಲಿಗೆ ಬಂದಿದೆ. ಟೀಕೆಗಳನ್ನು ಮರೆಯಬೇಕು, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದೇ ನಮ್ಮ ಸರ್ಕಾರದ ಕಲ್ಪನೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ’ ಎಂದು ಹೇಳಿದರು.

‘ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ, ದಾನ ಧರ್ಮದ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಹಸ್ತ ವಿರೋಧ ಪಕ್ಷದವರ ಬಾಯನ್ನು ಮುಚ್ಚಿದೆ, ಬೆಲೆ ಏರಿಕೆ ನಿಯಂತ್ರಣ ಮಾಡಿದೆ. ಈ ಹಸ್ತ ಐದು ಗ್ಯಾರಂಟಿ ಕೊಟ್ಟಿದೆ. ಈ ಹಸ್ತ ಗ್ಯಾರಂಟಿ ಮೂಲಕ ಕೈ ಗಟ್ಟಿ ಮಾಡಿದೆ. ಗ್ಯಾರಂಟಿ ಮೂಲಕ ಒಂದು ಲಕ್ಷ ಕೋಟಿ ಮನೆಗೆ ಕೊಟ್ಟಿದ್ದೇವೆ. ಬಿಜೆಪಿಯವರಿಗೆ ಇಂತಹ ಕಾರ್ಯವನ್ನು ಯಾವ ಕಾಲಕ್ಕೂ ಮಾಡಲಿಕ್ಕೆ ಆಗುವುದಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ರೇಷ್ಮೆ ಮಾರುಕಟ್ಟೆ: ಕೂಡ್ಲಿಗಿ ತಾಲ್ಲೂಕಿನ ರೇಷ್ಮೆಗೆ ಅತಿ ಹೆಚ್ಚು ಬೆಲೆ ಸಿಗುತ್ತಿದೆ. ರೇಷ್ಮೆ ಬೆಳೆ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಒಂದು ಮಾರುಕಟ್ಟೆ ಮಾಡುತ್ತೇವೆ. ರೈತನಿಗೆ ಸಂಬಳ, ಪ್ರಮೋಷನ್, ಲಂಚ, ಪೆನ್ಷನ್ ಇಲ್ಲ. ರೈತರನ್ನು ಬದುಕಿಸುವ ಕೆಲಸ ಮಾಡುತ್ತೇವೆ. ಸರ್ಕಾರ ನಿಮ್ಮ ಅಭಿವೃದ್ಧಿ ಕಾರ್ಯಗಳಲ್ಲಿ ಇದೆ’ ಎಂದು ಉಪಮುಖ್ಯಮಂತ್ರಿ ಭರವಸೆ ನೀಡಿದರು.

‘2028ರಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ಮತ್ತೆ ಶ್ರೀನಿವಾಸ್ ಅವರ ಕೈಬಲಪಡಿಸಬೇಕು’ ಎಂದು ಅವರು ಕ್ಷೇತ್ರದ ಜನತೆಯಲ್ಲಿ ಕೋರಿಕೆ ಸಲ್ಲಿಸಿದರು.

ವೇದಿಕೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಸಂಸದ ಇ.ತುಕಾರಾಂ, ಶಾಸಕರಾದ ರಘುಮೂರ್ತಿ, ಲತಾ ಮಲ್ಲಿಕಾರ್ಜುನ, ದೇವೇಂದ್ರಪ್ಪ, ಬಸವಂತಪ್ಪ, ಬಿ.ಎಂ.ನಾಗರಾಜ್, ಹಿರಿಯ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಎಚ್.ಆಂಜನೇಯ, ಎಂ.ಬಿ.ನಬಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಜಿಲ್ಲಾ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಐಜಿಪಿ ವರ್ತಿಕಾ ಕಟಿಯಾರ್, ಎಸ್ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ಅಲಿ ಅಕ್ರಂ ಷಾ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶೇಖ್ ಮೊಹಮ್ಮದ್ ಜಿಲಾನ್, ಎಡಿಸಿ ಇ.ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ನೇತ್ರಾವತಿ, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ ಇದ್ದರು.

‘ಕ್ರಿಯಾಶೀಲ ಶಾಸಕ’

ನಮ್ಮ ರಾಜ್ಯದಲ್ಲಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡುವ ಶಾಸಕರಲ್ಲಿ ಡಾ.ಶ್ರೀನಿವಾಸ್ ಒಬ್ಬರು. ವಿಧಾನಸೌಧದಲ್ಲಿ ಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚು ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ. ಕಳೆದ 30 ತಿಂಗಳಲ್ಲಿ ನಮ್ಮ ಇಲಾಖೆಯಿಂದ ₹100 ಕೊಟಿಗೂ ಅಧಿಕ ಅನುದಾನವನ್ನು ಶಾಸಕ ಶ್ರೀನಿವಾಸ್ ಅವರಿಗೆ ನೀಡಲಾಗಿದ್ದು ರಸ್ತೆಗಳು ಸೇತುವೆಗಳು ಶಾಲೆಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವ ಮೂಲಕ ಶಾಸಕರ ಬೇಡಿಕೆಯನ್ನು ಈಡೇರಿಸಲಾಗುವುದು. ಶ್ರೀನಿವಾಸ್ ಅವರಿಗೆ ರಾಜಕೀಯ ಶಕ್ತಿ ನೀಡುವ ಕೆಲಸವನ್ನು ಕ್ಷೇತ್ರದ ಜನರು ಮಾಡಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

‘₹77 ಕೋಟಿ ಮೈಕ್ರೋ ಯೋಜನೆ’

‘ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಕಾರ್ಯ ವೈಖರಿ ಮೆಚ್ಚಬೇಕಿದೆ. ಕ್ಷೇತ್ರದ ವಿಷಯದಲ್ಲಿ 24x7 ಕೆಲಸ ಮಾಡುತ್ತಾರೆ. ಜಿಲ್ಲೆಗೆ ನಿಗದಿಯಾಗಿದ್ದ ₹94 ಕೋಟಿ ಮೈಕ್ರೊ ಅನುದಾನದಲ್ಲಿ ₹77 ಕೋಟಿ ಅನುದಾನವನ್ನು ಶ್ರೀನಿವಾಸ್ ಪಡೆದಿದ್ದಾರೆ. ವಿಧಾನಸೌಧದಲ್ಲಿ ಪ್ರತಿ ನಿತ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಫೈಲ್ಗಳನ್ನು ಕೈಯಲ್ಲಿ ಹಿಡಿದು ಗುಮಾಸ್ತನಂತೆ ತಿರುಗಾಡುತ್ತಾರೆ. ಈ ಶಾಸಕರ ಕ್ಷೇತ್ರದ ಕಾಳಜಿ ಮೆಚ್ಚಬೇಕಿದೆ. ಗ್ಯಾರಂಟಿಯಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಬಿಜೆಪಿಯವರು ಬೊಬ್ಬೆ ಹೊಡಿಯುತ್ತಿದ್ದಾರೆ. ಆದರೆ ರಾಜ್ಯದ ವಿವಿಧ ಕಡೆ ₹11 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

‘ಕೊಟ್ಟ ಮಾತು ಈಡೇರಿದೆ’

‘ನಾನು ಈ ತಾಲ್ಲೂಕಿನವನಲ್ಲ ಜಿಲ್ಲೆಯವನಲ್ಲ. ಅನಿರೀಕ್ಷಿತವಾಗಿ ನಾನು ಇಲ್ಲಿಗೆ ಬಂದ ಸಂದರ್ಭದಲ್ಲಿ ನೀವು ನನ್ನನ್ನು ಶಾಸಕನ್ನಾಗಿ ಮಾಡಿದ್ದೀರಿ. ಚುನಾವಣೆ ಸಂದರ್ಭದಲ್ಲಿ ಭದ್ರಾ ಮೆಲ್ದಂಡೆ ನೀರನ್ನು ತರಬೇಕು ಎಂದು ಹೇಳುತ್ತಿದ್ದರು. ಆದರೆ ಆ ನೀರು ಬರುವುದು ಕನಸಿನ ಮಾತು ಎಂದು ಹೇಳಿ ತುಂಗಭದ್ರಾ ನದಿಯಿಂದ ನೀರು ಕೆಲಸ ಮಾಡುತ್ತೇನೆ ಎಂದು ನಾನು ಮಾತು ನೀಡಿದ್ದೆ. ಅದರಂತೆ ನಾಬರ್ಡ್ ಮತ್ತು ಸರ್ಕಾರದಿಂದ ಸುಮಾರು ₹840 ಕೋಟಿ ಅನುದಾನ ತಂದು ಈ ಕಾರ್ಯಕ್ರಮ ಅನುಷ್ಠಾನ ಮಾಡಿದ್ದೇವೆ. ಇದು ಇಂದು ಪೂರ್ಣಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡಿರುವುದು ಸಂತಷ ತಂದಿದೆ’ ಎಂದು ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.

‘ಜಿಡಿಪಿ ಅಲ್ಲ ತಲಾ ಆದಾಯದ ಬಗ್ಗೆ ಮಾತನಾಡಿ’

‘ನಮ್ಮ ಗ್ಯಾರಂಟಿ ಯೋಜನೆಗಳ ಖರ್ಚು ವರ್ಷಕ್ಕೆ ₹55ರಿಂದ 60 ಸಾವಿರ ಕೋಟಿ. ಐದು ವರ್ಷಕ್ಕೆ 3 ಲಕ್ಷ ಕೋಟಿ ಅನುದಾನ ಬೇಕು. ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳಿವೆ. ನಮ್ಮಂತೆ ಅವರು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ರಾಜ್ಯದಲ್ಲಿ ಇದುವರೆಗೂ ₹594 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಇದು ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಲ್ಲಿ ನಾವಿದ್ದೇವೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ ನಮ್ಮ ತಲಾ ಆದಾಯ ಆಫ್ರಿಕಾ ದೇಶವದವರಿಗಿಂತಲೂ ಕಡಿಮೆ ಇದೆ. ಅದರ ಬಗ್ಗೆ ಮಾತನಾಡಲಿ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ತಲಾ ಆದಾಯ ಹೆಚ್ಚಳವಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.