ಹರಪನಹಳ್ಳಿ: ತಾಲ್ಲೂಕಿನ ಹಲುವಾಗಲು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಜೂರು ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಮಾರ್ಚ್ 22ರಂದು ಸಂಜೆ ತಂದೆಯೊಂದಿಗೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಪ್ರಥಮ ವರ್ಷದ ಬಿಇ ವಿದ್ಯಾರ್ಥಿ ಎನ್.ಜಿ. ಮನು, ದ್ವಿತೀಯ ಪಿಯು ವಿದ್ಯಾರ್ಥಿ ಎನ್.ಜಿ. ಪ್ರಜ್ವಲ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದರು.

ಈ ಬಗ್ಗೆ ನಾನು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರೂ ಪರಿಹಾರ ಹಣ ಮುಂಜೂರು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮಲ್ಲಿಕಾರ್ಜುನ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-25-896140918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.