ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ವಿರೂಪಾಕ್ಷ ದೇಗುಲಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

Published 2 ನವೆಂಬರ್ 2023, 14:08 IST
Last Updated 2 ನವೆಂಬರ್ 2023, 14:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕರ್ನಾಟಕದ ಹೆಸರು ನಾಮಕರಣ ಮಾಡಿ ಐವತ್ತು ವರ್ಷ ಕಳೆದ ಹಿನ್ನಲೆಯಲ್ಲಿ ಐತಿಹಾಸಿಕ ಹಂಪಿಯಲ್ಲಿ ಅದ್ಧೂರಿ ಕಾರ್ಯಕ್ರಮ ಅರಂಭವಾಗಿದ್ದು, ಕರ್ನಾಟಕ ಸಂಭ್ರಮ - 50 ಜ್ಯೋತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉರಿಸಿದ್ದಾರೆ. ಅದಕ್ಕೆ ಮೊದಲಾಗಿ ಮೌಢ್ಯವನ್ನು ಬದಿಗೊತ್ತಿ ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಹಂಪಿ ವಿರೂಪಾಕ್ಷೇಶ್ವರನ ದರ್ಶನ ಪಡೆದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆಗೆ ತೆರೆ ಎಳೆದ ಸಿಎಂ, ವಿರೂಪಾಕ್ಷೇಶ್ವರ ದೇವಸ್ಥಾನ ಮತ್ತು ಪಂಪಾದೇವಿ, ಭುವನೇಶ್ವರಿ ದೇವಿ ದರ್ಶನ ಪಡೆದರು. ಬಳಿಕ ಸಾಂಸ್ಕೃತಿಕ ಮೆರವಣಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

‘‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎನ್ನುವ ಘೋಷ ವಾಕ್ಯ ವರ್ಷವಿಡಿ ಮೊಳಗಲಿ. ರಾಜ್ಯಾದ್ಯಂತ ವರ್ಷವಿಡಿ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಸಂಭ್ರಮ - 50 ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸುತ್ತಲಿದೆ’ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಸಚಿವರಾದ ಎಚ್. ಕೆ.ಪಾಟೀಲ್, ಶಿವರಾಜ ತಂಗಡಗಿ, ಜಮೀರ್ ಅಹ್ಮದ್ ಖಾನ್, ರಾಮಲಿಂಗ ರೆಡ್ಡಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಶಾಸಕರಾದ ಎಚ್. ಆರ್. ಗವಿಯಪ್ಪ, ಡಾ.ಎನ್.ಟಿ. ಶ್ರೀನಿವಾಸ್, ಜೆ.ಎನ್. ಗಣೇಶ್, ಲತಾ ಮಲ್ಲಿಕಾರ್ಜುನ, ಇತರರು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT