ವಿಜಯನಗರ | 'ಅಗ್ನಿಪಥ' ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರೋಧಿಸಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಪ್ರಧಾನಿಗೆ ಬರೆದ ಮನವಿ ಪತ್ರ, ತಹಶೀಲ್ದಾರ್‌ಗೆ ಸಲ್ಲಿಸಿದರು. ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಾಯಕ ಶೆಟ್ಟರ್ ಮಾತನಾಡಿ, ಕೇಂದ್ರ ಸರ್ಕಾರ ಅಗ್ನಿಪಥ ಹೆಸರಿನಲ್ಲಿ ಸೇನೆಗೆ ತಾತ್ಕಾಲಿಕ ನೇಮಕದ ಮೂಲಕ ಯುವಜನರಿಗೆ ಭವಿಷ್ಯವನ್ನು ಅತಂತ್ರಗೊಳಿಸುತ್ತಿರುವುದು ಖಂಡನಾರ್ಹ ಕೂಡಲೇ ವಾಪಸ್ ಪಡೆಯಬೇಕು ಎಂದರು.
ಮುಖಂಡ ಗುಜ್ಜಲ್ ನಾಗರಾಜ ಮಾತನಾಡಿ, ಉದ್ಯೋಗ ಸೃಷ್ಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಯುವಜನರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಸೇನೆಯ ಅವಧಿ ನಂತರ ಬಿಜೆಪಿ ಕಚೇರಿಯಲ್ಲಿ ಕೆಲಸ ಕೊಡಿಸುವಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಈ ಯೋಜನೆ ಮೂಲಕ ಯುವಕರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಮುಖಂಡರಾದ ಇಮಾಮ್ ನಿಯಾಜಿ, ದೀಪಕ್ ಸಿಂಗ್, ಕುರಿ ಶಿವಮೂರ್ತಿ, ಗುಜ್ಜಲ ರಘು, ಸಯ್ಯದ್ ಮಹಮ್ಮದ್, ಭರತ್ ಕುಮಾರ್ ಸಿ.ಆರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.