ಅರಸೀಕೆರೆ (ವಿಜಯನಗರ ಜಿಲ್ಲೆ): ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದ ಕಾನ್ಸ್‌ಟೆಬಲ್ ಕೆ.ಕೋಟೆಪ್ಪ (36) ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾತ್ರಿ ಕರ್ತವ್ಯದಲ್ಲಿದ್ದ ಕೋಟೆಪ್ಪ ಅವರಿಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಸಿಬ್ಬಂದಿ ನೆರವಿನೊಂದಿಗೆ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.