ಹೊಸಪೇಟೆ: ಪ್ರಸ್ತುತ ಸಮಾಜದಲ್ಲಿ ಯಾವುದೇ ಜಾತಿ, ಧರ್ಮದ ಭೇದವಿಲ್ಲದೇ ಸಾಮಾಜಿಕ ಮತ್ತು ಶೈಕ್ಷಣಿಕ ಹೀಗೆ ಎಲ್ಲಾ ಹಂತದಲ್ಲಿಯೂ ಪ್ರತಿಯೊಬ್ಬರಿಗೂ ಸಮಾನತೆ ಸಿಗಬೇಕಾದರೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಬೃಹತ್ ಸಂವಿಧಾನವೇ ಕಾರಣ ಎಂದು ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ನಾಗಣ್ಣ ಕಿಲಾರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸೊಮವಾರ ನಗರದ ಶಂಕರ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಭೀಮಾ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಸಂಗೀತ ಮತ್ತು ಹಾಡಿನ ಮೂಲಕ ಜನರಿಗೆ ತಲುಪಿಸುವ ಸದುದ್ದೇಶದಿಂದ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಆಯ್ದ 12 ಜಿಲ್ಲೆಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಮೈಸೂರಿನ 'ಅಮ್ಮ ವಸುಂಧರ' ತಂಡದವರು ಭೀಮನ ತತ್ವಾದರ್ಶಗಳನ್ನು ಸ್ವರಗಳಲ್ಲಿ ಪ್ರಸ್ತುತಪಡಿಸಿದರು. ಆಕಾಶವಾಣಿಯ ನವೀನ್ ಮಸ್ಕಲ್, ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಸಿ.ದೇವಣ್ಣ, ದ್ವಾರಕಸ್ವಾಮಿ, ಗುರುರಾಜ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.