ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾಗೆ ಕಾಂಗ್ರೆಸ್‌–ಬಿಜೆಪಿ ಎಂಬ ಭೇದವಿಲ್ಲ: ಸಚಿವ ಆನಂದ್‌ ಸಿಂಗ್‌

Last Updated 9 ಜನವರಿ 2022, 12:27 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ):'ಕೊರೊನಾ ಸೋಂಕು ಹರಡುವುದಕ್ಕೆ ಗಂಡು–ಹೆಣ್ಣು, ಕಾಂಗ್ರೆಸ್‌–ಬಿಜೆಪಿ ಎಂಬ ಭೇದವಿಲ್ಲ. ಅದು ಎಲ್ಲರಿಗೂ ತಗಲುತ್ತದೆ’ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ದುರುದ್ದೇಶದಿಂದ ವೀಕೆಂಡ್‌ ಕರ್ಫ್ಯೂ ಜಾರಿಗೊಳಿಸುತ್ತಿದೆ ಎಂಬ ಕಾಂಗ್ರೆಸ್‌ ಆರೋಪ ಸತ್ಯಕ್ಕೆ ದೂರವಾದುದು. ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಮೇಕೆದಾಟು ವಿಚಾರವಾಗಿ ಕಾಂಗ್ರೆಸ್‌ ಪಕ್ಷ ಪಾದಯಾತ್ರೆ ಹಮ್ಮಿಕೊಂಡಿದೆ. ನಿಯಮ ಉಲ್ಲಂಘಿಸಿದರೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತದೆ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT