ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಬಹು ಅಂಗಾಂಗ ವೈಫಲ್ಯ ಹೊಂದಿದ್ದ ವ್ಯಕ್ತಿ ಸಾವು

Published 3 ಜನವರಿ 2024, 16:31 IST
Last Updated 3 ಜನವರಿ 2024, 16:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಯಕೃತ್‌ ಮತ್ತು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ 45 ವರ್ಷದ ವ್ಯಕ್ತಿಗೆ ಮೂರು ದಿನಗಳ ಹಿಂದೆ ಇಲ್ಲಿ ಕೋವಿಡ್ ದೃಢಪಟ್ಟಿದ್ದು, ಅವರು ಮೃತಪಟ್ಟಿದ್ದಾರೆ.

‘ನಗರದ 88 ಮುದ್ಲಾಪುರದವರಾದ ವ್ಯಕ್ತಿ ಕುಡಿತದ ಚಟ ಹೊಂದಿದ್ದರು. ಚಿಕಿತ್ಸೆಗೆಂದು ಬಂದಿದ್ದ ವೇಳೆ ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು. ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬಹು ಅಂಗಾಂಗ ವೈಫಲ್ಯಕ್ಕಾಗಿ ಅವರು ಮೂರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ದೃಢಪಟ್ಟ ಬಳಿಕ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.  ಚಿಕಿತ್ಸೆಗೆ ಸ್ಪಂದಿಸದೆ ಅವರು ಸೋಮವಾರ ಮೃತಪಟ್ಟರು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್ ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಮಧ್ಯೆ, ಜಿಲ್ಲೆಯಲ್ಲಿ ಹೊಸದಾಗಿ 8 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT