ಭಾನುವಾರ, ಜೂನ್ 13, 2021
25 °C

ಹೊಸಪೇಟೆ: ‘ಸೋಂಕಿತರು ಹೊರಗೆ ತಿರುಗಾಡಿದರೆ ಆರೈಕೆ ಕೇಂದ್ರಕ್ಕೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಕೋವಿಡ್‌–19 ಸೋಂಕು ದೃಢಪಟ್ಟ ನಂತರ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರು ಹೊರಗೆ ತಿರುಗಾಡಿದರೆ ಅಂತಹವರನ್ನು ನಗರ ಹೊರವಲಯದ ಜಂಬುನಾಥ ಗುಡ್ಡ ಬಳಿಯಿರುವ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಇರಿಸಲಾಗುವುದು’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಗುರುವಾರ ಎಚ್ಚರಿಕೆ ನೀಡಿದ್ದಾರೆ.

‘ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರು ಅನಗತ್ಯವಾಗಿ ಹೊರಗೆ ಓಡಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಸೋಂಕಿತರು ಒಂದುವೇಳೆ ಹೊರಗೆ ತಿರುಗಾಡುತ್ತಿದ್ದರೆ ಅವರ ಹೆಸರು, ವಿಳಾಸವನ್ನು ಮೊಬೈಲ್ ಸಂಖ್ಯೆ 9740563535ಗೆ ಮಾಹಿತಿ ನೀಡಬಹುದು’ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು