ಬುಧವಾರ, ಮೇ 25, 2022
27 °C

ಹೊಸಪೇಟೆ: ಕೋವಿಡ್‌ ವಾರ್‌ ರೂಂ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಕೋವಿಡ್‌ ಪ್ರಕರಣಗಳ ಮೇಲೆ ತೀವ್ರ ನಿಗಾ ಇಡುವುದಕ್ಕಾಗಿ ನಗರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಟ್ಟಡದ ಎರಡನೇ ಮಹಡಿಯಲ್ಲಿ ಕೋವಿಡ್‌ ವಾರ್‌ ರೂಂ ಆರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದ್ದಾರೆ.

‘ಕೋವಿಡ್ ಕಂಟ್ರೋಲ್ ರೂಂ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ:08394-200108 ಗೆ ಸಾರ್ವಜನಿಕರು ಕರೆ ಮಾಡಿ ಕೋವಿಡ್‍ಗೆ ಸಂಬಂಧಿಸಿದ ದೂರು, ಸಮಸ್ಯೆಗಳ ಬಗ್ಗೆ ತಿಳಿಸಬಹುದು. ಕೋವಿಡ್ ಪ್ರಕರಣಗಳು ಮತ್ತು ಬೆಡ್‍ಗಳ ಬಗ್ಗೆ ಮಾಹಿತಿಯನ್ನು ಈ ಸಹಾಯವಾಣಿಗೆ ಕರೆ ಮಾಡಿ ತಿಳಿದು ನೆರವು ಪಡೆಯಬಹುದು’ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು