ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹5.55 ಲಕ್ಷ ನಗದು, ಗಾಂಜಾ ವಶ

Published 21 ಮಾರ್ಚ್ 2024, 4:14 IST
Last Updated 21 ಮಾರ್ಚ್ 2024, 4:14 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ಟಿ.ಬಿ.ಡ್ಯಾಂ ಗಣೇಶ್‌ ಗುಡಿ ಸಮೀಪದ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ದಾಖಲೆ ರಹಿತ ₹5,55,573 ನಗದು ವಶಪಡಿಸಿಕೊಳ್ಳಲಾಗಿದ್ದು, ಹಂಪಿಯ ಅಕ್ಕತಂಗಿಯರ ಗುಂಡು ಪ್ರದೇಶದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2 ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ದಾಖಲೆ ರಹಿತ ನಗದನ್ನು ಕೊಪ್ಪಳ ಕಡೆಯಿಂದ ಹೊಸಪೇಟೆ ಕಡೆಗೆ ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠ ಶ್ರೀಹರಿಬಾಬು ಬಿ.ಎಲ್‌.ತಿಳಿಸಿದ್ದಾರೆ.

ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT