ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭತ್ತದ ಗದ್ದೆಗೆ ಮೊಸಳೆ: ಸೆರೆ ಹಿಡಿದ ಅರಣ್ಯ ಸಿಬ್ಬಂದಿ

Last Updated 23 ಫೆಬ್ರುವರಿ 2023, 16:06 IST
ಅಕ್ಷರ ಗಾತ್ರ

ಹೂವಿನಹಡಗಲಿ (ವಿಜಯನಗರ ಜಿಲ್ಲೆ) : ತಾಲ್ಲೂಕಿನ ರಾಜವಾಳ ಬಳಿ ಭತ್ತದ ಗದ್ದೆಯಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಮೊಸಳೆಯನ್ನು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ತುಂಗಭದ್ರಾ ನದಿಯಿಂದ ಹೊರಗೆ ಬಂದ ಬೃಹತ್ ಮೊಸಳೆ ಭತ್ತದ ಗದ್ದೆಯಲ್ಲಿ ಓಡಾಡುತಿತ್ತು. ಇದರಿಂದ ಈ ಭಾಗದ ರೈತರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ರೈತರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಹಗ್ಗದ ನೆರವಿನಿಂದ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.

‘ನದಿಯಿಂದ ಮೊಸಳೆ ಹೊರ ಬಂದು ಗದ್ದೆಯಲ್ಲಿ ಸೇರಿಕೊಂಡಿತ್ತು. ಗ್ರಾಮಸ್ಥರು ಹಾಗೂ ಸಿಬ್ಬಂದಿ ನೆರವಿನಿಂದ ಮೊಸಳೆಯನ್ನು ಹಿಡಿದು ಮತ್ತೆ ನದಿಗೆ ಬಿಟ್ದಿದ್ದೇವೆ’ ಎಂದು ಅರಣ್ಯಾಧಿಕಾರಿ ಶಿವಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT