ಹರಪನಹಳ್ಳಿ: ‘ಗ್ರಾಮ ಪಂಚಾಯಿತಿ ಆಡಳಿತ ವೈಖರಿ, ಅಧಿಕಾರಿಗಳ ಬದ್ಧತೆ ಜೊತೆಗೆ ಸಾರ್ವಜನಿಕರ ಸಹಭಾಗಿತ್ವ ಸ್ಪಂದನೆ ದೊರೆತಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ’ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ತಾಲ್ಲೂಕಿನ ಕಂಚಿಕೇರೆ ಗ್ರಾಮದಲ್ಲಿ ವಿಜಯನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ವತಿಯಿಂದ ಸೋಮವಾರ ಆಯೋಜಿಸಿದ್ದ 2024– 25ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಕಂಚಿಕೆರೆ ಗ್ರಾಮ ಪಂಚಾಯಿತಿಗೆ ಅಭಿನಂದನಾ ಸಮಾರಂಭ ಜರುಗಿತು.

‘ಮಹಿಳೆಯರು ಕುಟುಂಬ ಜವಾಬ್ದಾರಿಯ ಜೊತೆಗೆ ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಗ್ಯಾರಂಟಿ ಸಹಕಾರಿಯಾಗಿದೆ’ ಎಂದರು.

ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಮಾತನಾಡಿ, ‘ಹರಪನಹಳ್ಳಿ ಕ್ಷೇತ್ರದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ₹175 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದ್ದು, ಸ್ಮಶಾನ ಅಭಿವೃದ್ಧಿಯಲ್ಲಿ ಕರ್ನಾಟಕ ಮಾದರಿಯಾಗಿದೆ. 49 ಗ್ರಾಮಗಳ ಸ್ಮಶಾನ ಸ್ಥಳ ನಿಗದಿಯಾಗಿಲ್ಲ, ಪೂರ್ಣಗೊಳಿಸಲಾಗುವುದು. ಈ ನಡುವೆ ಕೇಂದ್ರ ಬಿಜೆಪಿ ಸರ್ಕಾರದ ವಿಬಿ-ಜಿ-ರಾಮ್ಜಿ ಕಾಯ್ದೆಯಿಂದ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು.

ಪ್ರಾಸ್ತಾವಿಕ ಮಾತನಾಡಿದ ಕಾರ್ಯನಿರ್ವಹಣಾಧಿಕಾರಿ ವೈ.ಎಚ್ ಚಂದ್ರಶೇಖರ್, ‘ಕಂಚಿಕೆರೆ, ಲಕ್ಷ್ಮೀಪುರ ಬೆಣ್ಣೆಹಳ್ಳಿ ನಿಗದಿಪಡಿಸಿದ ಮಾನದಂಡಗಳು ಯಶಸ್ವಿಗೊಳಿಸಿ ಪುರಸ್ಕಾರಕ್ಕೆ ಭಾಜನವಾಗಿವೆ ಹಾಗೂ ಮಹಿಳೆಯರಿಗೆ ಮೀಸಲಿಟ್ಟ ₹43 ಲಕ್ಷ ಹಣವನ್ನು ಸ್ವಸಹಾಯ ಸಂಘದಲ್ಲಿ ಯಶಸ್ಸು ಪಡೆದು, ₹ 1.66 ಕೋಟಿಗೆ ಹೆಚ್ಚಿಸಿಕೊಂಡಿದೆ ಎಂದರು.

ಉಪವಿಭಾಗಾಧಿಕಾರಿ ಟಿ.ಸುರೇಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಉದಯಶಂಕರ್, ದಿಶಾ ಸಮಿತಿ ನಾಮನಿರ್ದೇಶನ ಸದಸ್ಯ ರೆಡ್ಡಿ ಶಾಂತಕುಮಾರ್, ಮುಖಂಡ ಡಿ.ಅಬ್ದುಲ್ ರೆಹಮಾನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-25-1810880901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.