ಸೋಮವಾರ, ಜನವರಿ 24, 2022
28 °C

ಹಗರಿಬೊಮ್ಮನಹಳ್ಳಿ | ಸಾಲ ಬಾಧೆ: ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಾಲ ಬಾಧೆಗೆ ತಾಲ್ಲೂಕಿನ ಮುಟುಗನಹಳ್ಳಿ ಗ್ರಾಮದ ರೈತ ಚಿದಾನಂದಪ್ಪ (50) ಗುರುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

‘ಚಿದಾನಂದಪ್ಪ 2 ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಬ್ಯಾಡಗಿ ಮಾರುಕಟ್ಟೆಗೆ 60 ಚೀಲ ಮೆಣಸಿನಕಾಯಿ ಮಾರಾಟಕ್ಕೆ ತೆಗೆದುಕೊಂಡು ಹೋಗಿದ್ದರು. ಆದರೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಕ್ಕಿರಲಿಲ್ಲ. ಇದರಿಂದ ತೀವ್ರ ಮನನೊಂದು ಜೀವ ತ್ಯಜಿಸಿದ್ದಾರೆ. ಪಟ್ಟಣದ ಪ್ರಗತಿಕೃಷ್ಣ ಗ್ರಾಮೀಣ ಬ್ಯಾಂಕ್‌ನಲ್ಲಿ ₹1.20 ಲಕ್ಷ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದಲ್ಲಿ ₹1 ಲಕ್ಷ ಸಾಲ ಪಡೆದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಗ್ರ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್‌ ಶರಣಮ್ಮ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು