ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಖನಿಜ ನಿಧಿಯಿಂದ ₹10 ಕೋಟಿ‌ ಬಿಡುಗಡೆಗೆ ಮನವಿ

Last Updated 8 ಏಪ್ರಿಲ್ 2021, 15:31 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಜಿಲ್ಲಾ ಖನಿಜ ನಿಧಿಯಿಂದ ₹10 ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ಕನ್ನಡ ವಿಶ್ವವಿದ್ಯಾಲಯ ಸಂರಕ್ಷಣಾ ಹೋರಾಟ ಸಮಿತಿಯವರು ಮನವಿ ಮಾಡಿದ್ದಾರೆ.

ಈ ಸಂಬಂಧ ಸಮಿತಿಯ ಮುಖಂಡರು ಗುರುವಾರ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಆನಂದ್ ಸಿಂಗ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಕೋರಿದ್ದಾರೆ.

‘2018-19ನೇ ಸಾಲಿನ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಬಾಕಿ ಉಳಿಸಿಕೊಂಡಿರುವ ಎರಡು ವರ್ಷದ ಸಹಾಯಧನ ಹಾಗೂ ಒಂದುವರೆ ವರ್ಷದ ಫೆಲೋಶಿಪ್‌ ಬಿಡುಗಡೆಗೆ ಕ್ರಮ ಜರುಗಿಸಬೇಕು. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೂರು ವರ್ಷ ಅವಧಿಯ ಫೆಲೋಶಿಪ್‌ ಐದು ವರ್ಷಕ್ಕೆ ವಿಸ್ತರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಸಮಿತಿಯ ಮುಖಂಡರಾದ ಎಂ.ಮುನಿರಾಜು, ಮಹಾಂತೇಶ್, ಮಹೇಶ್, ಮರಡಿ ಜಂಬಯ್ಯ ನಾಯಕ, ಜೆ.ಶಿವುಕುಮಾರ, ದೊಡ್ಡ ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT