ಬುಧವಾರ, ಮೇ 18, 2022
27 °C

ಕನ್ನಡ ಫಲಕಗಳ ಸಂಪೂರ್ಣ ಅನುಷ್ಠಾನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಡ್ಡಾಯ ಕನ್ನಡ ಫಲಕ ಅಳವಡಿಕೆಗೆ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ಈ ಸಂಬಂಧ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ವಿವಿಧ ಕನ್ನಡ ಪರ ಸಂಘಟನೆಗಳು ಮನವಿ ಸಲ್ಲಿಸಿ ಒತ್ತಾಯಿಸಿವೆ.

ಅಂಗಡಿ, ಹೋಟಲ್, ವಸತಿಗೃಹ, ಮದ್ಯದಂಗಡಿ, ಚಿತ್ರಮಂದಿರ ಹಾಗೂ ವಾಣಿಜ್ಯ ಕೇಂದ್ರಗಳ ಜಾಹೀರಾತು ಫಲಕಗಳಿಗೆ ಕನ್ನಡ ಕಡ್ಡಾಯವಾಗಿ ಆಳವಡಿಸಲು ಸೂಚಿಸಬೇಕು. ಎಲ್ಲಾ ರೀತಿಯ ವಾಣಿಜ್ಯ ಕೇಂದ್ರಗಳಿಗೂ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಸಂಚಾರ ಪೊಲೀಸ್ ಠಾಣೆಯಿಂದ ನಗರದಲ್ಲಿ ಆಳವಡಿಸಿರುವ ಸೂಚನಾ ಫಲಕಗಳಲ್ಲಿ ಕನ್ನಡ ಅಕ್ಷರ ಮತ್ತು ಸಂಖ್ಯೆಯನ್ನು ನಮೂದಿಸಬೇಕು. ಸರ್ಕಾರಿ ವಾಹನಗಳಲ್ಲಿ ಕನ್ನಡದ ನೋಂದಣಿ ಫಲಕ ಆಳವಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ), ಯುವಸೇನೆ, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಆಗ್ರಹಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು