ಗುರುವಾರ , ಮಾರ್ಚ್ 30, 2023
23 °C

ಕಾರ್ಮಿಕರ ಮರುನೇಮಕಕ್ಕೆ ಸಿಐಟಿಯು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಅಖಂಡ ಬಳ್ಳಾರಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಏಕಾಏಕಿ ವಜಾಗೊಳಿಸಿರುವ ಕ್ರಮವನ್ನು ಖಂಡಿಸಿ ಸಿಐಟಿಯು ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೂಡಲೇ 286 ಕಾರ್ಮಿಕರನ್ನು ಮರುನೇಮಕ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದರು.

ಸಿರುಗುಪ್ಪ, ಕಂಪ್ಲಿ, ಸಂಡೂರು, ಕುರೆಕುಪ್ಪ, ತೆಕ್ಕಲಕೊಟೆ, ಕುಡುತಿನಿ, ಕಮಲಾಪುರ, ಕೂಡ್ಲಿಗಿ, ಕೊಟ್ಟೂರು ಮತ್ತು ಹೂವಿನ ಹಡಗಲಿ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ 20 ವರ್ಷಗಳಿದ್ದ ದುಡಿಯುತ್ತಿದ್ದ 286 ಕಾರ್ಮಿಕರನ್ನು ಎಫ್.ಬಿ.ಎ.ಎಸ್ ತಂತ್ರಾಂಶದಲ್ಲಿ ಅಳವಡಿಸಲು ಸಾಧ್ಯವಿಲ್ಲ ಎಂಬ ನೆಪವೊಡ್ಡಿ ವಜಾಗೊಳಿಸಲಾಗಿದೆ. ಕೆಲಸ ಕಳೆದುಕೊಂಡ ಕಾರ್ಮಿಕ ಕುಟುಂಬಗಳು ಬೀದಿ ಪಾಲಾಗಿವೆ ಎಂದು ಸಿಐಟಿಯು ಮುಖಂಡರು ಆರೋಪಿಸಿದರು.

ವಜಾಗೊಳಿಸಿರುವ ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರನ್ನು ಮರುನೇಮಕಗೊಳಿಸಿ ಕಾರ್ಮಿಕರ ಸೇವಾ ಹಿರಿತನವನ್ನು ಮುಂದುವರೆಸಲು ಕಾರ್ಮಿಕರೊಂದಿಗೆ ಜಂಟಿ ಸಭೆಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಭಾಸ್ಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜೆ.ಸತ್ಯಬಾಬು, ಅಭಿಲಾಷ್, ಅನಿಲ್, ಆದಿಶೇಷ ಮತ್ತು ಎನ್.ತಿಮ್ಮಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.