ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಗೆ ಆಗ್ರಹ

Last Updated 2 ಮಾರ್ಚ್ 2022, 9:54 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪೌರಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಗೊಳಿಸುವಂತೆ ಆಗ್ರಹಿಸಿ ಸಮಾನತೆ ಯೂನಿಯನ್ ಕಾರ್ಯಕರ್ತರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಕೋವಿಡ್‌ ಲಾಕ್‌ಡೌನ್‌ನಿಂದ ಆರ್ಥಿಕತೆಗೆ ಪೆಟ್ಟು ಬಿದ್ದಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ ಜನಪ್ರತಿನಿಧಿಗಳು ಶೇ 50ರಷ್ಟು ವೇತನ ಹೆಚ್ಚಿಸಿಕೊಂಡಿದ್ದಾರೆ. ಆದರೆ, ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಲು ಹಿಂದೇಟು ಹಾಕುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸಮಾನತೆ ಯೂನಿಯನ್ ರಾಜ್ಯ ಸಂಚಾಲಕ ರಾಮಚಂದ್ರ ಮಾತನಾಡಿ, ಆರೋಗ್ಯವನ್ನು ಲೆಕ್ಕಿಸದೆ ಕೆಲ‌ಸ ಮಾಡುವ ಪೌರಕಾರ್ಮಿಕರು ಹಾಗೂ ಯುಜಿಡಿ ಕಾರ್ಮಿಕರಿಗೆ ಮಾಸಿಕ ಕನಿಷ್ಠ ₹31,000 ವೇತನ ಹಾಗೂ ನಿತ್ಯ ₹70 ಉಪಾಹಾರ, ₹100 ಊಟದ ಭತ್ಯೆ ನೀಡಬೇಕು. ರಾಜ್ಯದ ಎಲ್ಲ ಸಫಾಯಿ ಕರ್ಮಚಾರಿಗಳು ಮತ್ತು ಅವಲಂಬಿತರಿಗೆ ಗುರುತಿನ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು. ಸುರೇಶ್, ರಾಜ, ಕೃಷ್ಣ, ಶ್ರೀನಿವಾಸುಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT