ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡೇತರ ಜಾಹೀರಾತು ತೆರವಿಗೆ ಆಗ್ರಹ

Last Updated 26 ಏಪ್ರಿಲ್ 2022, 11:40 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ವಾಣಿಜ್ಯ ಮಳಿಗೆ ಹಾಗೂ ರಸ್ತೆ ವಿಭಜಕಗಳಲ್ಲಿರುವ ಕನ್ನಡೇತರ ನಾಮಫಲಕಗಳನ್ನು ತೆರವುಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

ಈ ಸಂಬಂಧ ಮಂಗಳವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದರು.

ನಗರದ ವಿವಿಧ ಭಾಗಗಳಲ್ಲಿ ಕನ್ನಡೇತರ ಫಲಕ, ಜಾಹೀರಾತು ಹಾವಳಿ ಹೆಚ್ಚಾಗಿದೆ. ಆದಷ್ಟು ಶೀಘ್ರ ನಗರಸಭೆ ತೆರವುಗೊಳಿಸದಿದ್ದಲ್ಲಿ ಸಂಘಟನೆಯಿಂದ ಫಲಕಗಳಿಗೆ ಮಸಿ ಬಳಿಯಲಾಗುತ್ತದೆ ಎಂದು ಎಚ್ಚರಿಸಿದರು.

ಸಂಘಟನೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಚ್.ಶ್ರೀನಿವಾಸ್, ಎಸ್.ಎಂ.ಜಾಫರ್, ಗುಜ್ಜಲ ಲಿಂಗಣ್ಣ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT