ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ್ರೋಹ ಹೇಳಿಕೆ ಆರೋಪ: ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹ

Last Updated 21 ಫೆಬ್ರುವರಿ 2022, 12:46 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತ್ರಿವರ್ಣ ಧ್ವಜದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ರ್‍ಯಾಲಿ ನಡೆಸಿದ ಕಾರ್ಯಕರ್ತರು, ಈಶ್ವರಪ್ಪ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಪ್ರಭಾರ ತಹಶೀಲ್ದಾರ್ ಮೇಘ ಅವರಿಗೆ ಸಲ್ಲಿಸಿದರು.

ಕಾಂಗ್ರೆಸ್ ಮುಖಂಡ ಗುಜ್ಜಲ್‌ ನಾಗರಾಜ ಮಾತನಾಡಿ, ರಾಷ್ಟ್ರ ಧ್ವಜ ಭಾರತೀಯರ ಅಸ್ಮಿತೆ ಹಾಗೂ ಸಂವಿಧಾನದ ಸಂಕೇತವಾಗಿದೆ. ಕೆ.ಎಸ್.ಈಶ್ವರಪ್ಪ ಅವರು ತ್ರಿವರ್ಣ ಧ್ವಜ ಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸುವ ಹೇಳಿಕೆ ಖಂಡನೀಯವಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಾಯಕ ಶೆಟ್ಟರ್, ಮುಖಂಡರಾದ ವೆಂಕಟರಾವ್ ಘೋರ್ಪಡೆ, ಮೊಹಮ್ಮದ್‌ ಇಮಾಮ್‌ ನಿಯಾಜಿ, ದೀಪಕ್ ಸಿಂಗ್, ಸಿ.ಖಾಜಾ ಹುಸೇನ್, ನಿಂಬಗಲ್ ರಾಮಕೃಷ್ಣ, ಎಂ.ಸಿ.ವೀರಸ್ವಾಮಿ, ಸೋಮಶೇಖರ್‌ ಬಣ್ಣದಮನೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT