ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಮ್ಯಾಂಡ್ ರಿಜಿಸ್ಟರ್‌ಗೆ ಸೇರಿಸುವಂತೆ ಒತ್ತಾಯ

Published 19 ಜೂನ್ 2024, 16:03 IST
Last Updated 19 ಜೂನ್ 2024, 16:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸಮೀಪದ ನಾಗೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಡಿಓಬಳಾಪುರದ ಆಶ್ರಯ ಯೋಜನೆಯ 95 ಜನ ಫಲಾನುಭವಿಗಳಿಗೆ 1991ರಲ್ಲಿ ನೀಡಿರುವ ನಿವೇಶದ ಹಕ್ಕುಪತ್ರಗಳನ್ನು ಡಿಮ್ಯಾಂಡ್ ರಿಜಿಸ್ಟ್‌ರ್‌ನಲ್ಲಿ ಸೇರಿಸುವಂತೆ ಒತ್ತಾಯಿಸಿ ಬುಧವಾರ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಫಲಾನುಭವಿಗಳು, 1991ರಲ್ಲಿ ಆಶ್ರಯ ಯೋಜನೆ ಅಡಿಯಲ್ಲಿ 95 ಜನ ಬಡ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ಆದರೆ ಇದುವರೆಗೂ ಪಂಚಾಯ್ತಿಯವರು ಮೂಲಸೌಕರ್ಯ ಒದಗಿಸದೇ ಹಾಗೂ ಡಿಮ್ಯಾಂಡ್ ರಿಜಿಸ್ಟ್‌ರ್‌ ಸೇರಿಸುವಂತೆ ಒತ್ತಾಯಿಸಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಅಲ್ಲದೆ ಹಿಂದೆ ಹಲವು ಬಾರಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿಯೂ ಸಹ ಗಮನಕ್ಕೆ ತರಲಾಗಿತ್ತು. ಜೊತೆಗೆ ಶಾಸಕ ಎಚ್.ಆರ್.ಗವಿಯಪ್ಪ ಅವರಿಗೂ ಮನವಿ ಸಲ್ಲಿಸಲಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಫಲಾನುಭವಿಗಳು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT