ಹೊಸಪೇಟೆ (ವಿಜಯನಗರ): ಖಾಲಿ ಇರುವ ಕಾರ್ಯದರ್ಶಿ–2, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಬಡ್ತಿ ನೀಡುವುದನ್ನು ತಡೆಹಿಡಿದು ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿ ಆಗ್ರಹಿಸಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎ. ಅತೀಕ್ ಅವರಿಗೆ ಮಂಗಳವಾರ ತಾಲ್ಲೂಕಿನ ಪಾಪಿನಾಯಕನಹಳ್ಳಿ ಸಮೀಪ ಭೇಟಿಯಾಗಿ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಕೆಲಸದ ವೇಳೆ ಕೋವಿಡ್‌ನಿಂದ ಮೃತರಾದ ಕುಟುಂಬದವರಿಗೆ ಪರಿಹಾರ ಧನ ಕೊಡಬೇಕು. 15ನೇ ಹಣಕಾಸು ಅನುದಾನದಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗೆ ಸಕಾಲಕ್ಕೆ ವೇತನ ಪಾವತಿಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷ ಆರ್.ಎಸ್. ಬಸವರಾಜ, ಸಿಐಟಿಯು ಜಿಲ್ಲಾ ಅಧ್ಯಕ್ಷ ಆರ್. ಭಾಸ್ಕರ್ ರೆಡ್ಡಿ, ಮುಖಂಡರಾದ ಪ್ರಕಾಶ್, ಮಲ್ಲಿಕಾರ್ಜುನ ಸ್ವಾಮಿ, ಶಾರದಾಮಾತೆ, ಮೆಟ್ರಿ ಶಿವು, ಪಾಪಿನಾಯಕನಹಳ್ಳಿ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.