ಹಗರಿಬೊಮ್ಮನಹಳ್ಳಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಸಂಪೂರ್ಣ ಹಾಳುಮಾಡುತ್ತಿದೆ’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತಾಲ್ಲೂಕು ಘಟಕದ ಕಾರ್ಯದರ್ಶಿ ಎಸ್.ಅನ್ವರ್ ಭಾಷಾ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧ ಬಸವೇಶ್ವರ ವೃತ್ತದ ಬಳಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.