ಹೊಸಪೇಟೆ (ವಿಜಯನಗರ): ಮಾಜಿ ದೇವದಾಸಿಯರ ಮರು ಸಮೀಕ್ಷೆ ಪೂರ್ಣಗೊಳಿಸಲು ಅ.24ರ ಗಡುವು ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ದಾಖಲಾತಿ ಸಿಗುತ್ತಿಲ್ಲ. ಅವಧಿಯನ್ನು ಡಿಸೆಂಬರ್ವರೆಗೆ ವಿಸ್ತರಿಸಬೇಕು ಎಂದು ಇಲ್ಲಿ ನಡೆದ ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಒತ್ತಾಯಿಸಲಾಯಿತು.

ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ- ಕರ್ನಾಟಕ, ಸಖಿ ಸಂಸ್ಥೆ ಹೊಸಪೇಟೆ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಸಮೀಕ್ಷೆ ನಡೆಯುತ್ತಿರುವ 15 ಜಿಲ್ಲೆಗಳ ಪ್ರತಿನಿಧಿಗಳು ಇದ್ದರು.

ಸಮೀಕ್ಷೆ ವೇಳೆ ಕೇಳುತ್ತಿರುವ ದಾಖಲೆಗಳ ವಿಚಾರದಲ್ಲಿ ಏಕರೂಪತೆ ಇಲ್ಲ. ನೆಟ್ವರ್ಕ್ ಸಮಸ್ಯೆ ಇದೆ. ಕೆಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಮಿತಿಗೆ ಈ ಸಮೀಕ್ಷೆಯ ಬಗ್ಗೆ ಯಾವುದೇ ಮಾಹಿತಿ ತಲುಪಿಲ್ಲ ಮತ್ತು ಸಮೀಕ್ಷೆಯ ಬಗ್ಗೆ ಸಭೆಯನ್ನು ಕೂಡಾ ಮಾಡಿಲ್ಲ ಎಂದು ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯದ (ಎನ್ಎಲ್ಎಸ್ಯು) ಪ್ರೊ.ಆರ್.ವಿ.ಚಂದ್ರಶೇಖರ ‘ಪ್ರಜಾವಾಣಿ’ಗೆ ತಿಳಿಸಿದರು.

ಸಮೀಕ್ಷಕರಿಗೆ ಸಮಗ್ರ ತರಬೇತಿ ನೀಡಬೇಕು. ಹೀಗಾಗಿ ಗಡುವು ವಿಸ್ತರಿಸಿ ಎಲ್ಲ ಮಾಜಿ ದೇವದಾಸಿಯರ ಕುಟುಂಬಗಳ ಸಮೀಕ್ಷೆ ಸಮಗ್ರವಾಗಿ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.