ದೇವರಹಿಪ್ಪರಗಿ: ‘ಮಕ್ಕಳ ಗ್ರಾಮಸಭೆಯಿಂದ ಮಕ್ಕಳ ಭವಿಷ್ಯ ನಿರ್ಮಾಣ. ಮಕ್ಕಳು ಹಂಚಿಕೊಂಡಿರುವ ಮೂಲಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವಿ.ಪಟ್ಟಣಶೆಟ್ಟಿ ಹೇಳಿದರು.

ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಹುಣಶ್ಯಾಳ, ಸ್ನೇಹ ಸಂಸ್ಥೆ ಕೂಡ್ಲಿಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಮಾತನಾಡಿದರು.

ಮಕ್ಕಳು ಹೇಳಿದಂತೆ ಶೌಚಾಲಯ, ಕುಡಿಯುವ ನೀರು, ಶಾಲಾ ಆವರಣದ ಗೋಡೆ, ಶಿಥಿಲ ಕೊಠಡಿಗಳ ದುರಸ್ತಿ, ಆಟೋಪಕರಣಗಳು, ಬೆಂಚ್, ಆಟದ ಮೈದಾನ ಮೊದಲಾದ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದರು.

ಸ್ನೇಹಸಂಸ್ಥೆ ಸಂಯೋಜಕ ಸಾಗರ ಘಾಟಗೆ ಮಾತನಾಡಿ, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು.

ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಎಸ್.ಎಸ್.ಗಡೇದ, ಮಾದರಿ ಶಾಲೆಯ ಮುಖ್ಯಶಿಕ್ಷಕ ಎಂ.ಎಸ್.ಹಂದಿಗನೂರ, ಇತರರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋರಮ್ಮ ಪೂಜಾರಿ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.

ಹುಣಶ್ಯಾಳ ಪಂಚಾಯಿತಿ ವ್ಯಾಪ್ತಿಯ ಹುಣಶ್ಯಾಳ, ಆಲಗೂರ, ಅಸಂತಾಪೂರ, ಚಟ್ನಳ್ಳಿ, ಆನೆಮಡು, ಸಲಾದಹಳ್ಳಿ ಗ್ರಾಮಗಳ ಶಾಲೆಗಳ ಮಕ್ಕಳು ತಮ್ಮ ಶಾಲೆಯಲ್ಲಿ ಇರುವ ಮೂಲ ಸಮಸ್ಯೆಗಳ ಬಗ್ಗೆ ಹೇಳಿದರು. ಮಕ್ಕಳ ಸಭೆಯಲ್ಲಿ ಬೇಡಿಕೆ ಪಟ್ಟಿ ಪಡೆದರೂ ಅವುಗಳನ್ನು ಅನುಷ್ಠಾನ ಮಾಡುತ್ತಿಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಹುಸೇನಸಾಬ ನಾಗಾವಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಬ್ದುಲಗನಿ ತಿಂಥಣಿ, ಎ.ಆರ್.ಸವಾರ, ಸಾಹಿತಿ, ಶಿಕ್ಷಕ ಮುತ್ತು ಕುಂಟೋಜಿ, ಭಾಗಣ್ಣ ಹಾಳಕಿ, ಸುವರ್ಣ, ಆರೋಗ್ಯ ಇಲಾಖೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸದಸ್ಯರು, ಪಾಲಕರು, ಮುಖ್ಯ ಶಿಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.