ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಕೂಡ್ಲಿಗಿಯಲ್ಲಿ 74 ಕೆರೆ ತುಂಬುವ ಯೋಜನೆಗೆ ಚಾಲನೆ ನೀಡುವುದರ ಜತೆಗೆ ₹1,234 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಗೆ ಹೆಗಲು ಕೊಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್.

ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಕೆರೆ ತುಂಬಿಸುವ ಯೋಜನೆ ಪ್ರಸ್ತಾವನೆ ಬಗ್ಗೆ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆ ಮಾತನಾಡಿ ಯೋಜನೆ ಅನುಷ್ಠಾನಕ್ಕೆ ಸಂಪುಟದ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾದರು.

ಕಳೆದ ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೂಡ್ಲಿಗಿ ಕ್ಷೇತ್ರದ ಕಾಲೊನಿ ಅಭಿವೃದ್ಧಿಗೆ ₹8 ಕೋಟಿ ಒದಗಿಸಿರುವ ಸಚಿವ ಜಮೀರ್, ವಸತಿ ಇಲಾಖೆಯಿಂದ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 10 ಎಕರೆ ಜಾಗದಲ್ಲಿ 626 ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ 383 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಒಪ್ಪಿಗೆ ನೀಡಿದ್ದಾರೆ. ಕೆಕೆಆರ್ಡಿಬಿ ಅನುದಾನದಲ್ಲಿ ಕೂಡ್ಲಿಗಿ ತಾಲ್ಲೂಕಿಗೆ ಸಿಂಹಪಾಲು ಒದಗಿಸಿಕೊಟ್ಟಿದ್ದಾರೆ.

ವಿಜಯನಗರ ಜಿಲ್ಲೆ ಉಸ್ತುವಾರಿ ಸಚಿವರಾಗಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ 19 ಶಾಲೆ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ₹65.92 ಕೋಟಿ, ಅಲ್ಪಸಂಖ್ಯಾತರ ಕಾಲೊನಿ ಅಭಿವೃದ್ಧಿಗೆ ₹20 ಕೋಟಿ ಒದಗಿಸಿದ್ದಾರೆ. ವಸತಿ ಇಲಾಖೆಯಿಂದ ಜಿಲ್ಲೆಗೆ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 5,607 ಮನೆ, ರಾಜೀವ್ ಗಾಂಧಿ ವಸತಿ ನಿಗಮದಿಂದ 6,232 ಮನೆ ಮಂಜೂರು ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲೂ ಅಭಿವೃದ್ಧಿಗೆ ಒತ್ತು

ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹಮದ್ ಖಾನ್ ಜಿಲ್ಲೆಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಶಾಲೆ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ₹52.50 ಕೋಟಿ ಕಾಲೊನಿ ಅಭಿವೃದ್ಧಿಗೆ ₹25 ಕೋಟಿ ಸಮುದಾಯ ಭವನ ನಿರ್ಮಾಣಕ್ಕೆ ₹12 ಕೋಟಿ ಒದಗಿಸಿದ್ದಾರೆ. ವಸತಿ ಇಲಾಖೆ ವತಿಯಿಂದ ರಾಜೀವ್ ಗಾಂಧಿ ಅಭಿವೃದ್ಧಿ ನಿಗಮದಿಂದ ಬಳ್ಳಾರಿಯಲ್ಲಿ ₹371.14 ಕೋಟಿ ವೆಚ್ಚದಲ್ಲಿ 5616 ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡಲಾಗಿದೆ. ಸಂಡೂರಿನಲ್ಲಿ ₹135.74 ಕೋಟಿ ವೆಚ್ಚದಲ್ಲಿ 2172 ಮನೆ ನಿರ್ಮಿಸಿಕೊಡಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಬಸವ ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ 6653 ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡಲಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 5978 ಮನೆ ನಿರ್ಮಿಸಿಕೊಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.