ಶನಿವಾರ, ಸೆಪ್ಟೆಂಬರ್ 25, 2021
22 °C

ನಾಟಿವೈದ್ಯ ಆನಂದಯ್ಯ ಔಷಧ ವಿತರಣೆಗೆ ತಡೆ: ಮುಖ್ಯಮಂತ್ರಿಗೆ ಸ್ವಾಮೀಜಿ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಆಂಧ್ರ ಪ್ರದೇಶದ ಕೃಷ್ಣಪಟ್ಟಣಂನ ನಾಟಿವೈದ್ಯ ಆನಂದಯ್ಯ ಅವರು ಗಿಡಮೂಲಿಕೆಗಳಿಂದ ತಯಾರಿಸಿದ ಕೋವಿಡ್‌ ಔಷಧ ವಿತರಣೆಗೆ ಅನುಮತಿ ನೀಡಬೇಕೆಂದು ಕೋರಿ ಹನುಮದ್‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಂಸ್ಥಾಪಕ ಗೋವಿಂದಾನಂದ ಸರಸ್ವತಿ ಸ್ವಾಮೀಜಿ, ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಸ್ವಾಮೀಜಿಯವರು ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಗೆ ಉಚಿತವಾಗಿ ಔಷಧ ವಿತರಿಸುತ್ತಿದ್ದಾರೆ. ಇತ್ತೀಚೆಗೆ ಕಮಲಾಪುರದಲ್ಲೂ ವಿತರಿಸಿದ್ದರು. ಆದರೆ, ವಿಷಯ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಡಳಿತ ಅದಕ್ಕೆ ತಡೆ ಒಡ್ಡಿತ್ತು. ಸರ್ಕಾರದಿಂದ ಅನುಮತಿ ಪಡೆಯದ ಕಾರಣ ಔಷಧ ವಿತರಣೆಗೆ ಅವಕಾಶ ಕಲ್ಪಿಸುತ್ತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಮಧ್ಯೆ ಸ್ವಾಮೀಜಿ ಸಿ.ಎಂ.ಗೆ ಪತ್ರ ಬರೆದಿದ್ದಾರೆ.

ಗಿಡಮೂಲಿಕೆಗಳಿಂದ ತಯಾರಿಸಿದ ಈ ಔಷಧಕ್ಕೆ ಆಂಧ್ರ ಪ್ರದೇಶದ ಆಯುಷ್‌ ಇಲಾಖೆ ಮಾನ್ಯ ಮಾಡಿದೆ. ಈಗಾಗಲೇ ಹಲವು ಕಡೆಗಳಲ್ಲಿ ವಿತರಿಸಲಾಗಿದೆ. ಈಗ ಜಿಲ್ಲಾಡಳಿತ ವಿನಾಕಾರಣ ತಡೆಯೊಡ್ಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು