ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಭ್ರಮದಿಂದ ಗಣಪನ ಮೂರ್ತಿಗಳ ವಿಸರ್ಜನೆ

Last Updated 4 ಸೆಪ್ಟೆಂಬರ್ 2022, 17:47 IST
ಅಕ್ಷರ ಗಾತ್ರ

ಹೊಸಪೇಟೆ : ಐದನೇ ದಿನದ ಗಣಪನ ಮೂರ್ತಿಗಳ ವಿಸರ್ಜನೆ ಸಡಗರ, ಸಂಭ್ರಮದ ನಡುವೆ ಭಾನುವಾರ ರಾತ್ರಿ ನಗರದಲ್ಲಿ ನಡೆಯಿತು.

ವಿವಿಧ ಗಣೇಶ ಮಂಡಳಿಯವರು ಅಲಂಕರಿಸಿದ ವಾಹನದಲ್ಲಿ ಗಣೇಶನ ಮೂರ್ತಿಗಳನ್ನು ಇರಿಸಿ, ಡಿ.ಜೆ ಹಾಕಿ ಅದರ ಮುಂದೆ ಯುವಕರು ಮೈಮರೆತು ಕುಣಿದರು. ಮೂರಂಗಡಿ ವೃತ್ತ, ಬಸ್ ನಿಲ್ದಾಣ ರಸ್ತೆ ಮೂಲಕ ಮೆರವಣಿಗೆಯಲ್ಲಿ ಹಾದು ರೈಲು ನಿಲ್ದಾಣ ರಸ್ತೆಯ ತುಂಗಭದ್ರಾ ಕೆಳಮಟ್ಟದ ಕಾಲುವೆಯಲ್ಲಿ ಮೂರ್ತಿಗಳನ್ನು ಕ್ರೇನ್ ಸಹಾಯದಿಂದ ಒಂದೊಂದಾಗಿ ವಿಸರ್ಜಿಸಿದರು. ಮೆರವಣಿಗೆ ಕಣ್ತುಂಬಿಕೊಳ್ಳಲು ನೂರಾರು ಜನ ಸೇರಿದ್ದಾರೆ.

ನಗರದಲ್ಲಿ ತಡರಾತ್ರಿ ವರೆಗೆ 83 ಹಾಗೂ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ 47 ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಮೆರವಣಿಗೆ ಹಾದು ಹೋಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಶುಕ್ರವಾರ ಮೂರನೇ ದಿನ 209 ಮೂರ್ತಿಗಳನ್ನು ವಿಸರ್ಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT