ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿರುವ ವಿವಿಧ 91 ವರ್ಗಗಳ 35 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ವಿವಿಧ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ವಿತರಿಸುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಗೆ ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಶುಕ್ರವಾರ ಇಲ್ಲಿ ಚಾಲನೆ ನೀಡಿದ್ದು, ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವುದಾಗಿ ತಿಳಿಸಿದರು.

ಈ ಯೋಜನೆ ಅಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಚಾಲಕರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ಚೆಕ್ ಹಾಗೂ ಇತರ ಕಾರ್ಮಿಕರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ನಿಂದ ರಾಜ್ಯಕ್ಕೆ ಸಿಗುವ ಸೆಸ್ನಲ್ಲಿ ಶೇ 1ರಷ್ಟು ಹಣವನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ನೀಡಬೇಕೆಂದು ಆಗ್ರಹಿಸಲಾಗಿದೆ. ಅದಕ್ಕೆ ಒಪ್ಪಿಗೆ ದೊರೆತರೆ ₹2,200 ಕೋಟಿ ಸಂಗ್ರಹವಾಗಲಿದ್ದು, ಅದನ್ನು ಸ್ಮಾರ್ಟ್ ಕಾರ್ಡ್ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿನ ಆರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ಹೊಸದಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟು 91 ವರ್ಗಗಳ ಕಾರ್ಮಿಕರನ್ನು ಗುರುತಿಸಿ ಸೌಲಭ್ಯವನ್ನು ನೀಡಲಾಗುತ್ತಿದೆ. ಸಹಾಯವಾಣಿ ಸಂಖ್ಯೆ 155214ಕ್ಕೆ ಕರೆ ಮಾಡಿದರೆ ಸೂಕ್ತ ಮಾಹಿತಿ ಸಿಗುತ್ತದೆ ಎಂದರು.

‘ಕೇಂದ್ರ ಸರ್ಕಾರ ಜಿಡಿಪಿಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯನ್ನು ಮೂಡಿಸುತ್ತಿದೆ. ಜನಸಂಖ್ಯೆ ಇರುವಲ್ಲಿ ಜಿಡಿಪಿ ಬೆಳವಣಿಗೆ ದೊಡ್ಡ ವಿಷಯವಲ್ಲ, ಆದರೆ ತಲಾ ಆದಾಯ ಹೆಚ್ಚಬೇಕು, ಅದರ ಬಗ್ಗೆ ಬಿಜೆಪಿಯವರು ಮಾತನಾಡುವುದೇ ಇಲ್ಲ’ ಎಂದು ಅವರು ಛೇಡಿಸಿದರು.

ಸಂಸದ ಇ.ತುಕಾರಾಂ ಮಾತನಾಡಿ, ಸಿಎಂ ಸಿದ್ದರಾಮಯ್ಯನವರು ಎರಡನೇ ದೇವರಾಜ್ ಅರಸು ಇದ್ದಂತೆ, ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಯಕಯೋಗಿ ಇದ್ದಂತೆ ಎಂದು ಶ್ಲಾಘಿಸಿದರು.

‘ಮೇ 20ರಂದು ಎರಡು ವರ್ಷ ಯಶಸ್ವಿಯಾಗಿ ಪೂರೈಸಿದ ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಆಯೋಜಿಸುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕಂದಾಯ ಇಲಾಖೆ ಸೇರಿ ಸುಮಾರು 1,11,111 ಜನ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುವ ಮೂಲಕ ವಿಜಯನಗರ ಜಿಲ್ಲೆ ರಾಜ್ಯದ ಗಮನ ಸೆಳೆದಿದೆ. ಇದೀಗ ಕಾರ್ಮಿಕ ಇಲಾಖೆಯಿಂದ ಜಿಲ್ಲೆಯ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುತ್ತಿರುವುದು ರಾಜ್ಯ ಸರ್ಕಾರದ ಗರಿಮೆಯಾಗಿದೆ’ ಎಂದರು.

‘ಸಂಸದರಾಗಿ ಜವಾಬ್ದಾರಿ ವಹಿಸಿಕೊಂಡ ಕೂಡಲೇ ಬಹುದಿನದಿಂದ ಅಮೆಗತಿಯಲ್ಲಿ ನಡೆಯುತ್ತಿದ್ದ ಬಳ್ಳಾರಿ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗೆ ವೇಗ ನೀಡಲಾಗಿದೆ. ಇದೇ ಅಕ್ಟೋಬರ್ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಜಿಲ್ಲೆಯಲ್ಲಿನ ಎಲ್ಲಾ ರೈಲು ಕ್ರಾಸಿಂಗ್ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು. ಶಿಕ್ಷಣ ಮತ್ತು ಆರೋಗ್ಯ ಹೆಚ್ಚಿನ ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗುತ್ತದೆ ಎಂದರು.

ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಹಿಡಿದ ಕೆಲಸವನ್ನು ಛಲದಿಂದ ಮಾಡುವ ಪ್ರವೃತ್ತಿ ಲಾಡ್ ಅವರದ್ದು, ಕೇಂದ್ರದ ವಿರುದ್ಧ ಹಾಗೂ ಪ್ರಧಾನಿ ವಿರುದ್ಧ ಮಾತನಾಡುವ ಗತ್ತು ಇರುವ ಏಕೈಕ ಸಚಿವ ಸಂತೋಷ ಲಾಡ್ ಆಗಿದ್ದಾರೆ, ಅವರ ಎಲ್ಲಾ ಕೆಲಸಗಳಿಗೆ ನನ್ನ ಬೆಂಬಲವಿದೆ ಎಂದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿ, ಕಾರ್ಮಿಕರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸಚಿವರ ಕಾಳಜಿಯಿಂದಲೇ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುತ್ತಿದೆ. ಸರ್ಕಾರದ ಎಲ್ಲಾ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು. ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿದರು.

ಕಾರ್ಮಿಕ ಇಲಾಖೆ ಆಯುಕ್ತ ಎಚ್.ಎನ್.ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ಎಸ್.ಬಿ.ರವಿಕುಮಾರ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್ ಗುಪ್ತ, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿ.ಎಲ್., ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಂ ಷಾ, ಕಲಬುರ್ಗಿ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ, ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಇ.ದೊಂಬರಮತ್ತೂರು ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.