ಹೊಸಪೇಟೆ (ವಿಜಯನಗರ): ‘ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅವರಿಗೆ ಇ.ಡಿ ನೋಟಿಸ್ ಬಂದಿದೆ ಎಂದು ಹೇಳುವುದು ಸರಿಯಲ್ಲ. ಡಿಕೆಶಿ ಒಬ್ಬ ಸಮರ್ಥ, ಪ್ರಭಾವಿ ನಾಯಕ ಎಂದು ಬಿಜೆಪಿ ಭಾವಿಸಿಲ್ಲ. ಅವರಿಗೆ ಅಡ್ಡಿಪಡಿಸುವ ಅಗತ್ಯವೂ ಪಕ್ಷಕ್ಕಿಲ್ಲ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

‘ಡಿಸೆಂಬರ್ 19ರ ಬಳಿಕ ರಾಜ್ಯದಲ್ಲಿ ದೊಡ್ಡ ಬೆಳವಣಿಗೆ ಆಗುವುದು ನಿಶ್ಚಿತ. ಇಲ್ಲದಿದ್ದರೆ, ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸರ್ಕಾರ ಪತನವಾಗುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ.ಶಿವಕುಮಾರ್ ಒಂದು ವೇಳೆ ಮುಖ್ಯಮಂತ್ರಿಯಾದರೆ, ರಾಜ್ಯಕ್ಕೆ ಅಧೋಗತಿ ಎದುರಾಗುವುದು ನಿಶ್ಚಿತ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

‘ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಪಟ್ಟ ವಿಷಯ. ಆದರೆ, ವಾಲ್ಮೀಕಿ ನಿಗಮದ ಹಣ ಲೂಟಿ ಹೊಡೆದ ಆರೋಪ ಹೊತ್ತು ರಾಜೀನಾಮೆ ನೀಡಿದ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿದರೆ ಕಾಂಗ್ರೆಸ್ ಪಕ್ಷ ಮತ್ತು ನಾಯಕತ್ವದ ಮನಸ್ಥಿತಿ ತಿಳಿಯಲು ಕಷ್ಟವೇನಲ್ಲ. ಆ ಪ್ರಕರಣದ ಕುರಿತು ಕಾನೂನು ಹೋರಾಟ ಮುಂದುವರಿಯಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.