ಭಾನುವಾರ, ಏಪ್ರಿಲ್ 2, 2023
32 °C

ಹೊಸಪೇಟೆ| ನಾಯಿ ಕಡಿತದಿಂದ ಬಾಲಕಿಗೆ ಗಂಭೀರ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಬೀದಿ ನಾಯಿ ಕಚ್ಚಿದ್ದರಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಚಿತ್ತವಾಡ್ಗಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ವೇದಶ್ರೀ ಕೊಟ್ರೇಶ (9) ಗಾಯಗೊಂಡ ಬಾಲಕಿ. ಮೂರನೇ ತರಗತಿಯಲ್ಲಿ ಓದುತ್ತಿರುವ ವೇದಶ್ರೀ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ನಾಯಿ ದಾಳಿ ನಡೆಸಿ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಗಮನಿಸಿ ನಾಯಿಯನ್ನು ಹೊಡೆದು ಓಡಿಸಿದ್ದಾರೆ.

ಘಟನೆಯನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ನಗರಸಭೆ ಪೌರಾಯುಕ್ತರು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದಾರೆ.
ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು