ಗುರುವಾರ , ಸೆಪ್ಟೆಂಬರ್ 29, 2022
28 °C

ವಿಜಯನಗರ | ಕೌಟುಂಬಿಕ ಕಲಹ: ಅವಹೇಳನ ಮಾಡಿದ ತಂದೆಯ ಕೊಲೆ ಮಾಡಿದ ಮಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಂದೆಯ ತಲೆಗೆ ಮಗ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ, ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ತಿಪ್ಪೇರುದ್ರಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಗುಡೇಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು