ಹೊಸಪೇಟೆ (ವಿಜಯನಗರ): ‘ಕತ್ತೆ ನೀಡಿ ಅದರ ಹಾಲು ಖರೀದಿಸುವ ವ್ಯವಹಾರದಲ್ಲಿ ತೊಡಗಿದ್ದ ‘ಜೆನ್ನಿ ಮಿಲ್ಕ್’ ಕಂಪನಿ ವಿರುದ್ಧ 278 ಮಂದಿ ದೂರು ನೀಡಿದ್ದು, ₹13.51 ಕೋಟಿ ವಂಚನೆಯಾಗಿರುವ ಸಾಧ್ಯತೆ ಇದೆ, ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಕೋರಿಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಶ್ರೀಹರಿಬಾಬು ಬಿ.ಎಲ್.ತಿಳಿಸಿದರು.