ವಿಜಯನಗರ: ಶಾಲೆ, ಕಾಲೇಜು ಸ್ಥಳಾಂತರಕ್ಕೆ ಎಸ್‌ಎಫ್‌ಐ ವಿರೋಧ
ಹೊಸಪೇಟೆ (ವಿಜಯನಗರ): ನಗರದ ಹೃದಯ ಭಾಗದಲ್ಲಿನ ಸರ್ಕಾರಿ ಶಾಲೆ ಮತ್ತು ಕಾಲೇಜು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲ್ಲೂಕು ಅಧ್ಯಕ್ಷ ಜೆ. ಶಿವುಕುಮಾರ ಆಗ್ರಹಿಸಿದ್ದಾರೆ.
‘ಬಾಲಕಿಯರ ಸರ್ಕಾರಿ ಪ್ರೌಢ ಶಾಲೆ ಹಾಗೂ ಕಾಲೇಜನ್ನು ಒಟ್ಟುಗೂಡಿಸಿ ನೂತನವಾಗಿ ಅಮರಾವತಿಯಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಗುವುದು ಎಂದು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿಕೆ ಕೊಟ್ಟಿದ್ದಾರೆ. ಅವರ ನಿರ್ಧಾರ ಸರಿಯಾದುದಲ್ಲ. ಈಗಿರುವ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಬಸ್ ನಿಲ್ದಾಣದ ಸಮೀಪವಿರುವುದರಿಂದ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಅನುಕೂಲವಾಗಿದೆ. ಅದನ್ನು ಬೇರೆಡೆ ಸ್ಥಳಾಂತರಿಸದೆ ಹಾಲಿ ಇರುವ ಶಾಲಾ, ಕಾಲೇಜು ಅಭಿವೃದ್ಧಿ ಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಶಾಲಾ– ಕಾಲೇಜು ವಿದ್ಯಾರ್ಥಿಗಳ ಅಭಿಪ್ರಾಯ ಪಡೆಯದೇ ಯಾವ ತೀರ್ಮಾನಕ್ಕೂ ಬರಬಾರದು. ಅಮರಾವತಿಯಲ್ಲಿ ಗೊತ್ತುಪಡಿಸಿರುವ ಜಾಗದಲ್ಲಿ ಮಹಿಳಾ ಪದವಿ ಕಾಲೇಜು ಅಥವಾ ಸರ್ಕಾರಿ ನರ್ಸಿಂಗ್ ಕಾಲೇಜು ಕಟ್ಟಬೇಕು. ಖಾಸಗಿ ನರ್ಸಿಂಗ್ ಶಿಕ್ಷಣ ಸಂಸ್ಥೆಗಳೇ ಹೆಚ್ಚಿವೆ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾರಂಭಿಸಿದರೆ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುತ್ತದೆ’ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.