ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ವಿರೂಪಾಕ್ಷ ದೇವಸ್ಥಾನ: ವಸ್ತ್ರಸಂಹಿತೆ ಜಾರಿ

Published 26 ಜನವರಿ 2024, 22:23 IST
Last Updated 26 ಜನವರಿ 2024, 22:23 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮುಜರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಶುಕ್ರವಾರದಿಂದ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ ಆಗಿದೆ.

ಪ್ರವಾಸಿ ತಾಣವೂ ಆದ ಹಂಪಿಗೆ ಸಾವಿರಾರು ಮಂದಿ ವಿದೇಶಿಯರು ಸಹ ಬರುತ್ತಾರೆ. ಅವರು ಹೆಚ್ಚಾಗಿ ತುಂಡು ಉಡುಗೆಯಲ್ಲಿ ಬರುತ್ತಿದ್ದು, ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರು ಕೇಳಿಬಂದಿತ್ತು. ಹೀಗಾಗಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಮಹಿಳೆಯರು ಸಹ ತುಂಡುಡುಗೆಯಲ್ಲಿ ಬಂದರೆ ಮೇಲೆ ಶಲ್ಯ ತೊಡಬೇಕಾಗಿದೆ. ಕೊಡುವ ವಸ್ತ್ರಕ್ಕೆ ಸದ್ಯ ಶುಲ್ಕ ಪಡೆಯುತ್ತಿಲ್ಲ. ದೇವರ ದರ್ಶನ ಮಾಡಿದ ಬಳಿಕ ವಸ್ತ್ರವನ್ನು ವಾಪಸ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

‘ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ, ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ವಿಶೇಷ ಕ್ರಮ ವಹಿಸಿದ್ದೇವೆ’ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT