ಕೊಟ್ಟೂರು: ‘ಕಂದಾಯ ಇಲಾಖೆಯ ಭೂಮಿ ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಡಿಜಿಟಲ್ ರೂಪಕ್ಕೆ ಪರಿವರ್ತಿಸಿರುವುದಲ್ಲದೇ ಸಾರ್ವಜನಿಕರು ಆನ್ಲೈನ್ ಮೂಲಕ ತ್ವರಿತವಾಗಿ ಪಡೆದುಕೊಳ್ಳಲು ಭೂ ಸುರಕ್ಷಾ ಯೋಜನೆ ಸಹಕಾರಿಯಾಗಿದೆ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಭೂ ಸುರಕ್ಷಾ ಯೋಜನೆಗೆ ಚಾಲನೆ ನೀಡಿ, ‘ದಾಖಲೆಗಳು ಕಳವಾಗದಂತೆ, ತಿದ್ದಲು ಹಾಗೂ ನಕಲು ದಾಖಲೆಗಳ ಸೃಷ್ಟಿಗೆ ಕಡಿವಾಣ ಹಾಕಲು ಯೋಜನೆ ಸಹಕಾರಿ’ ಎಂದರು.

ನಂದಿಪುರ ಮಠಾಧೀಶ ಮಹೇಶ್ವರ ಸ್ವಾಮೀಜಿ, ಮುಖಂಡ ಎಂ.ಎಂ.ಜೆ. ಹರ್ಷವರ್ಧನ್, ತಹಶೀಲ್ದಾರ್ ಜಿ.ಕೆ. ಅಮರೇಶ್, ಗ್ರೇಡ್–2 ತಹಶೀಲ್ದಾರ್ ಎಂ.ಪ್ರತಿಭಾ, ಉಪತಹಶೀಲ್ದಾರ್ ಅನ್ನದಾನೇಶ ಬಿ. ಪತ್ತಾರ್, ಶಿರಸ್ತೇದಾರ ರೇಖಾ ಹಾಗೂ ಸಿ.ಮ. ಗುರುಬಸವರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.