ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ; ರಾಜ್ಯಕ್ಕೆ ಕೇಂದ್ರ ತಾತ್ಸಾರ: ಚಲುವರಾಯಸ್ವಾಮಿ ಅಸಮಾಧಾನ

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಸಮಾಧಾನ
Published 29 ನವೆಂಬರ್ 2023, 13:18 IST
Last Updated 29 ನವೆಂಬರ್ 2023, 13:18 IST
ಅಕ್ಷರ ಗಾತ್ರ

ಕೂಡ್ಲಿಗಿ: ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡುವಲ್ಲಿ ತಾತ್ಸಾರ ಮನೋಭಾವ ತೋರುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,

ರಾಜ್ಯ ಸರ್ಕಾರವು ಸೆಪ್ಟಂಬರ್‌ನಲ್ಲಿ ನೀಡಿದ ವರದಿಗೆ ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನಾನು ಹಾಗೂ  ಸಚಿವ ಕೃಷ್ಣಬೈರೇಗೌಡ ಅವರು ಎರಡು ಬಾರಿ ಕೇಂದ್ರದ ಮಂತ್ರಿಗಳನ್ನು ಭೇಟಿಯಾಗಿದ್ದರೂ ಇವತ್ತು, ನಾಳೆ ಎಂದು ದಿನ ದೂಡುತ್ತಿದ್ದಾರೆ. ಎಲ್ಲಾ ರೀತಿಯ ಬೆಳಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದ್ದು, ಬರಗಾಲದಿಂದ ರೈತರಿಗೆ ಅಗಿರುವ ನಷ್ಟ ಭರ್ತಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ 32 ಸಾವಿರ ಕೃಷಿ ಹೊಂಡ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರ ಮಧ್ಯೆ ಇರುವ ವ್ಯತ್ಯಾಸಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಸರಿಪಡಿಸುತ್ತೇನೆ. ಡಿ. 4ರಿಂದ ಬೆಳಗಾವಿ ಅಧಿವೇಶ ಆರಂಭವಾಗಲಿದ್ದು, ಶಾಸಕ ಶ್ರೀನಿವಾಸ್ ಎನ್.ಟಿ. ಅವರೊಂದಿಗೆ ಕ್ಷೇತ್ರದ ಸಮಸ್ಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.‌

ಶಾಸಕ ಶ್ರೀನಿವಾಸ್ ಎನ್.ಟಿ. ಮಾತನಾಡಿ, ತಾಲ್ಲೂಕನ್ನು ಬರಗಾಲ ಪೀಡಿತ ಎಂದು ಘೋಷಿಸುವಂತೆ ನಾವು ಮಾಡಿದ ಮನವಿಗೆ ಸಚಿವರು ಸ್ಪಂದಿಸಿದ್ದಾರೆ. ಕ್ಷೇತ್ರಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನಗೌಡ, ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಮಾರಗೌಡ, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟೆ ಉಮೇಶ, ಮಹಿಳಾ ಘಟಕದ ಜಿ.ನಾಗಮಣಿ, ಮುಖಂಡರಾದ ಎನ್.ಟಿ.ತಮ್ಮಣ್ಣ, ನರಸಿಂಹಗಿರಿ ವೆಂಕಟೇಶ್, ರಾಜೇಂದ್ರಪ್ರಸಾದ್, ಉದಯಜನ್ನು, ಕೆ.ಎಂ.ಶಶಿಧರಸ್ವಾಮಿ, ಕಾವಲ್ಲಿ ಶಿವಪ್ಪ ನಾಯಕ, ಓಬಣ್ಣ, ಟಿ.ಜಿ.ಮಲ್ಲಿಕಾರ್ಜುನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT