ಹೊಸಪೇಟೆ (ವಿಜಯನಗರ): ‘ಗ್ರಾಮೀಣ ಹೆಣ್ಣು ಮಕ್ಕಳು ಹಾಗೂ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ವರ್ಷ ಅದಕ್ಕಾಗಿ ₹12 ಕೋಟಿ ಅನುದಾನ ನೀಡಲಾಗಿದೆ’ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.

ತಾಲ್ಲೂಕಿನ ಪಾಪಿನಾಯಕಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬುಧವಾರ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರದ ಈ ಕ್ರಮ ಶಾಲೆಯ ಸುತ್ತಮುತ್ತಲಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಲಿದೆ. ಪ್ರೌಢಶಾಲೆ ಇಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸುಮಾರು 10 ಕಿ.ಮೀ. ದೂರ ಸಂಚಾರಿಸಬೇಕಾಗಿತ್ತು. ಇದರಿಂದ ಹಲವಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದುದನ್ನು ಗಮನಿಸಿ ಯಾರೂ ಸಹ ಶಿಕ್ಷಣದಿಂದ ವಂಚಿರಾಗದಿರಲು ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ’ ಎಂದು ಹೇಳಿದರು.

‘ಮುಂದಿನ ದಿನಗಳಲ್ಲಿ ಜನರು ಗ್ರಾಮದಲ್ಲಿ ಒಂದು ಸೂಕ್ತ ಸ್ಥಳವನ್ನು ಗುರುತಿಸಿ ಕೊಟ್ಟಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಹಾಗೂ ಹೊಸ ಕ್ರೀಡಾಂಗಣವನ್ನು ನಿರ್ಮಾಸಲಾಗುತ್ತದೆ’ ಎಂದು ಹೇಳಿದರು.

‘ವಿವಿಧ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಮೂಲಸೌಲಭ್ಯ ಒದಗಿಸಲು ಮತ್ತು ಜಿಲ್ಲಾ ಕ್ರೀಡಾಂಗಣವನ್ನು ಅಭಿವೃದ್ದಿಪಡಿಸಲು ₹ 5 ಕೋಟಿ ಅನುದಾನವನ್ನು ಬಳಕೆ ಮಾಡಲಾಗುತ್ತಿದೆ. ಪಿ.ಕೆ.ಹಳ್ಳಿ, ನಾಗೇನಹಳ್ಳಿ, ಬಸವನದುರ್ಗ, ಗಾದಿಗನೂರು, ಕಮಲಾಪುರದ ಶಾಲೆಯಲ್ಲಿನ ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ ಹೊರಪೇಟೆ ಮಾತನಾಡಿ, ‘ನಮ್ಮ ಕ್ಷೇತ್ರದಲ್ಲಿ ಮೊದಲ ಬಾರಿ ಎರಡು ಪ್ರೌಢಶಾಲೆಗಳನ್ನು ಉನ್ನತೀಕರಿಸಲಾಗಿದೆ. ಪಾಪಿನಾಯಕಹಳ್ಳಿಯ ಭಾಗದಲ್ಲಿ ಪ್ರೌಢಶಾಲೆಯನ್ನು ಉನ್ನತೀಕರಿಸುವ ಮುಖಾಂತರ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯವನ್ನು ದೊರಕಿಸಿದಂತಾಗಿದೆ. ಶಾಸಕರು ಹೇಳಿದಂತೆ ಗ್ರಾಮದಲ್ಲಿ ಕೆಪಿಎಸ್ ನಿರ್ಮಿಸಿದಲ್ಲಿ ಒಂದನೇ ತರಗತಿಯಿಂದ ಪದವಿ ಪೂರ್ವ ಹಂತದವರೆಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗಲಿದೆ’ ಎಂದರು.

ಪಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಕ್ಲಮ್ಮ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಬಾಷಾ, ಎಸ್ಡಿಎಂಸಿ ಅಧ್ಯಕ್ಷ ವೀರೇಶ್ ಇದ್ದರು.

‘2 ವರ್ಷದಲ್ಲಿ ₹68 ಕೋಟಿ’

‘ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ವಿವಿಧ ಯೋಜನೆಗಳಿಗಾಗಿ ಶಾಸಕರ ಶಿಫಾರಸಿನ ಮೇರೆಗೆ ಎರಡು ವರ್ಷಗಳಲ್ಲಿ ₹68 ಕೋಟಿ ಅನುದಾನ ಸರ್ಕಾರದಿಂದ ಬಂದಿದೆ. 328 ಶಾಲೆಗಳ ಕೊಠಡಿಗಳ ದುರಸ್ತಿ ಹಾಗೂ 142ಕ್ಕೂ ಅಧಿಕ ಹೊಸ ಕಟ್ಟಡಗಳ ನಿರ್ಮಾಣ ಮಾಡಲಾಗಿದೆ ಹಾಗೂ 30 ಹೈಟೆಕ್ ಶೌಚಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಬಿಇಒ ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.