ಹೊಸಪೇಟೆ (ವಿಜಯನಗರ): ಶಿಕ್ಷಣ ಕ್ಷೇತ್ರದ ಸುಧಾರಣೆಗೆ ವಿಜಯನಗರ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಕೆಲಸ ಆಗಿದೆ. ಅದರ ಭಾಗವಾಗಿ ನಗರದಲ್ಲಿ ₹10 ಕೋಟಿ ವೆಚ್ಚದಲ್ಲಿ ಕ್ರೀಡಾಶಾಲೆ ಹಾಗೂ ನಗರ ಮತ್ತು ಕಮಲಾಪುರಗಳಲ್ಲಿ ಎರಡು ಶಾಲೆಗಳು ಸ್ಮಾರ್ಟ್ ಶಾಲೆಗಳಾಗಿ ಬದಲಾಗುವುದು ನಿಶ್ಚಿತ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ಇಲ್ಲಿನ ಸಾಯಿಲೀಲಾ ರಂಗಮಂದಿರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಕ್ರೀಡಾಂಗಣದ ಬಳಿ ₹ 5 ಕೋಟಿ ವೆಚ್ಚದಲ್ಲಿ ಕ್ರೀಡಾ ಶಾಲೆ, ಕ್ರೀಡಾಪಟುಗಳಿಗೆ ತರಬೇತಿ ಮತ್ತು ವಸತಿ, ಶೌಚಗೃಹ ವ್ಯವಸ್ಥೆ ಕಲ್ಪಿಸುವ ಕೆಲಸ ಆರಂಭವಾಗಿದೆ. ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ನೀಡಲಾಗಿದೆ. ಕ್ಷೇತ್ರದ ಎಲ್ಲ ಶಾಲೆಗಳಲ್ಲಿ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುವುದು ಎಂದರು.

‘ಶಾಲೆಗಳ ವಿಷಯದಲ್ಲಿ ಈ ಹಿಂದಿನ ಜಿಲ್ಲಾಧಿಕಾರಿ ಮತ್ತು ಬಿಇಒ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. 2 ವರ್ಷ ಅವಧಿಯಲ್ಲಿ 90 ತರಗತಿ ಕೊಠಡಿ ನಿರ್ಮಾಣ ಹಾಗೂ 350 ಕೊಠಡಿಗಳ ದುರಸ್ತಿ ಮಾಡಲಾಗಿದೆ. ವಿಜಯನಗರ ಕ್ಷೇತ್ರದಲ್ಲಿ 117 ಸರ್ಕಾರಿ ಶಾಲೆಗಳಿದ್ದು, ಅವುಗಳಲ್ಲಿ ಕನಿಷ್ಠ ಐದು ಪ್ರೌಢಶಾಲೆಗಳನ್ನು ಮಾದರಿ ಸ್ಮಾರ್ಟ್ ಶಾಲೆಗಳಾಗಿ ಅಭಿವೃದ್ಧಿಪಡಿಸಲಾಗುವುದು. ಇಲ್ಲಿ ಆಧುನಿಕ ಕಂಪ್ಯೂಟರ್ ಶಿಕ್ಷಣದ ಸೌಲಭ್ಯ ದೊರಕಲಿದೆ, ಮೊದಲಾಗಿ ಎರಡು ಶಾಲೆಗಳು ಸ್ಮಾರ್ಟ್ ಶಾಲೆಗಳಾಗಲಿವೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಆಶಾದಾಯಕವಾಗಿದೆ. ಕಳೆದ ವರ್ಷ ಜಿಲ್ಲೆಯು ರಾಜ್ಯದಲ್ಲಿ 18ನೇ ಸ್ಥಾನದಲ್ಲಿದ್ದು, ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿದೆ. ಮುಂದಿನ ಫಲಿತಾಂಶದಲ್ಲಿ ಇದಕ್ಕಿಂತ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸಲಾಗಿದೆ ಎಂದರು.

ಎಸ್ಪಿ ಎಸ್.ಜಾಹ್ನವಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕುರಿ ಶಿವಮೂರ್ತಿ ಮಾತನಾಡಿದರು.

ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಶಿವಾನಂದ ಉಪನ್ಯಾಸದಲ್ಲಿ ನೀಡಿ, ಶಿಕ್ಷಕರು ತಮ್ಮ ಬದುಕನ್ನು, ತಮ್ಮ ವೃತ್ತಿಯನ್ನು ಪ್ರೀತಿಸಬೇಕು ಹಾಗೂ ತಮ್ಮ ಮಕ್ಕಳಿಗಿಂತಲೂ ಹೆಚ್ಚಾಗಿ ತಮ್ಮ ವಿದ್ಯಾರ್ಥಿಗಳನ್ನು ಪ್ರೀತಿಸಿ ಅವರಿಗೆ ಪ್ರೇರಣೆ ಆಗಬೇಕು ಎಂದರು.

ಬಳಿಕ ರಾಜ್ಯ ಮಟ್ಟದ ಉತ್ತಮ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು ಹಾಗೂ ಹೊಸಪೇಟೆ ತಾಲ್ಲೂಕಿನ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಬಳ್ಳಾರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಉಪನಿರ್ದೇಶಕ ಜೆ.ಎಂ.ತಿಪ್ಪೇಸ್ವಾಮಿ, ಬಿಇಒ ಶೇಖರಪ್ಪ ಹೊರಪೇಟೆ, ಪ್ರಾಥಮಿಕ, ಪ್ರೌಢಶಾಲೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳ ಪದಾಧಿಕಾರಿಗಳು ಇದ್ದರು.

ಸರ್ಕಾರ ಸವಲತ್ತು ನೀಡಬಹುದೇ ವಿನ್ಃ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರೇ ನೀಡಬೇಕು ಇದು ಮಕ್ಕಳ ಭವಿಷ್ಯದ ಪ್ರಶ್ನೆ ತಮ್ಮ ಕರ್ತವ್ಯದಲ್ಲಿ ಚ್ಯುತಿಯಾಗದಿರಲಿ
ಎಚ್.ಆರ್.ಗವಿಯಪ್ಪ ಶಾಸಕ

ಸನ್ಮಾನವೋ ಅವಮಾನವೋ?

ರಾಜ್ಯಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕರು ಜಿಲ್ಲಾ ಮಟ್ಟದ ಪ್ರಶಸ್ತಿ ಗಳಿಸಿದ ಶಿಕ್ಷಕರಿಗೆ ಇದು ಜೀವನದ ಅಮೂಲ್ಯ ಕ್ಷಣ. ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರಿಂದ ಸನ್ಮಾನ ಸ್ವೀಕರಿಸಬೇಕು ಎಂಬ ಅವರ ಕನಸು ಮಾತ್ರ ಕನಸಾಗಿಯೇ ಉಳಿಯಿತು. ಭಾಷಣ ಮಾಡಿದ ಒಬ್ಬೊಬ್ಬರು ತಮ್ಮ ಮಾತು ಮುಗಿದ ತಕ್ಷಣ ವೇದಿಕೆಯಿಂದ ಇಳಿದು ಹೋಗಿಬಿಟ್ಟರು. ಕೊನೆಗೆ ಸನ್ಮಾನದ ವೇಳೆ ಗಣ್ಯರೆಲ್ಲ ಹೋಗಿ ‘ನಿಲಯದ ಕಲಾವಿದರಿಂದಲೇ’ ಸನ್ಮಾನ ಮಾಡಿಸಿಕೊಳ್ಳುವಂತಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.