ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | 18 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ

ಪರೀಕ್ಷೆ ಬರೆಯಲಿರುವ 15 ಸಾವಿರ ವಿದ್ಯಾರ್ಥಿಗಳು; ಕೇಂದ್ರಗಳ ಸುತ್ತ ನಿಷೇಧಾಜ್ಞೆ
Last Updated 3 ಮಾರ್ಚ್ 2023, 13:35 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಮಾ. 9ರಿಂದ 29ರ ವರೆಗೆ ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 15,479 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆಗಳು ನಡೆಯಲಿರುವ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಝರಾಕ್ಸ್, ಸೈಬರ್ ಸೆಂಟರ್ ಮುಚ್ಚಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಅಲ್ಲಿಂದ ಉತ್ತರ ಪತ್ರಿಕೆಗಳ ಬಂಡಲ್‌ ಸಾಗಿಸುವ ಸಂದರ್ಭದಲ್ಲಿ ಅಗತ್ಯ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಬೇಕು. ಪರೀಕ್ಷಾ ಪ್ರಾಧಿಕಾರದ ನಿಯಮದ ಪ್ರಕಾರ ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನೋಡಲ್ ಅಧಿಕಾರಿಗಳ ತ್ರಿಸದಸ್ಯ ಸಮಿತಿ ರಚಿಸಲಾಗಿದ್ದು, ಪರೀಕ್ಷೆಗೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮೀಣ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುವವ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಎಲ್ಲ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್‌ ಹಾಗೂ ಕೇಂದ್ರಗಳ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಪರಿಶೀಲಿಸಬೇಕೆಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವಪ್ರಭು ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಕೆ., ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT